ಹೋಶೇಯ 2:15 - ಪರಿಶುದ್ದ ಬೈಬಲ್15 ಅಲ್ಲಿ ಆಕೆಗೆ ನಾನು ದ್ರಾಕ್ಷಿತೋಟಗಳನ್ನು ಕೊಡುವೆನು. ಆಕೆಗೆ ಆಕೋರ್ ತಗ್ಗುಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೊಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವಳ ದ್ರಾಕ್ಷೆಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು; ಆಕೋರಿನ ತಗ್ಗನ್ನೇ ಅವಳ ಸುಖನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಯೌವನದಲ್ಲಿ, ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವಳ ದ್ರಾಕ್ಷಿತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ಕಣಿವೆಯನ್ನೇ, ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಅಲ್ಲಿ ಅವಳು ತಾನು ಯೌವನದ ದಿವಸಗಳಲ್ಲಿಯೂ, ಈಜಿಪ್ಟ್ ದೇಶದೊಳಗಿಂದ ಹೊರಟು ಬಂದ ದಿವಸಗಳಲ್ಲಿಯೂ ಆದ ಹಾಗೆ ಆಡುವಳು. ಅಧ್ಯಾಯವನ್ನು ನೋಡಿ |