Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:16 - ಪರಿಶುದ್ದ ಬೈಬಲ್‌

16 ಇವು ಯೆಹೋವನ ಮಾತುಗಳು. “ಆಗ ನನ್ನನ್ನು ನೀನು ‘ನನ್ನ ಗಂಡ’ ಎಂದು ಕರೆಯುವೆ. ‘ನನ್ನ ಬಾಳನು’ ಎಂದು ಕರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ನೀನು ನನ್ನನ್ನು ಇನ್ನು ‘ಬಾಳೀ’ ಅನ್ನದೆ ‘ಈಶೀ’ ಅನ್ನುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನಗಳಲ್ಲಿ ನೀನು ನನ್ನನ್ನು ‘ಬಾಳ್‍ದೇವತೆ’ ಎಂದು ಕರೆಯದೆ ‘ನನ್ನ ಪತಿ’ ಎಂದು ಕರೆಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನೀನು ನನ್ನನ್ನು ಇನ್ನು ಬಾಳೀ ಅನ್ನದೆ ಈಶೀ ಅನ್ನುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಹೀಗೆನ್ನುತ್ತಾರೆ, “ಆ ದಿವಸದಲ್ಲಿ,” “ನೀನು ನನ್ನನ್ನು ಇನ್ನು ಮೇಲೆ, ‘ನನ್ನ ಒಡೆಯ’ ಎಂದು ಕರೆಯದೆ, ‘ನನ್ನ ಪತಿ’ ಎಂದು ಕರೆಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:16
12 ತಿಳಿವುಗಳ ಹೋಲಿಕೆ  

ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು ‘ಇಡೀ ಭೂಲೋಕದ ದೇವರು’ ಎಂದು ಕರೆಯುವರು.


ಆಕೆಯು ತನ್ನ ಪ್ರಿಯತಮರ ಹಿಂದೆ ಓಡಿಹೋದರೂ ಅವರನ್ನು ಹಿಡಿಯಲಾರಳು. ಆಕೆಯು ತನ್ನ ಪ್ರಿಯತಮರನ್ನು ಹುಡುಕುವಳು. ಆದರೆ ಅವರು ಆಕೆಗೆ ಸಿಗುವುದಿಲ್ಲ. ಆಗ ಆಕೆ ಹೀಗೆ ಹೇಳುವಳು, ‘ನಾನು ನನ್ನ ಮೊದಲನೇ ಪತಿಯ ಬಳಿಗೆ (ಯೆಹೋವನು) ಹೋಗುವೆನು. ನಾನು ಆತನೊಂದಿಗೆ ಇದ್ದಾಗ ನನ್ನ ಜೀವಿತವು ಎಷ್ಟೋ ಚೆನ್ನಾಗಿತ್ತು. ಈಗಿನ ನನ್ನ ಜೀವಿತಕ್ಕಿಂತ ಆಗಿನ ಜೀವಿತವು ಎಷ್ಟೋ ಮೇಲಾಗಿತ್ತು.’


“ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು.


ನಾವೆಲ್ಲರೂ ಆನಂದಿಸೋಣ ಮತ್ತು ಸಂತಸಪಡೋಣ! ದೇವರನ್ನು ಮಹಿಮೆಪಡಿಸೋಣ! ಕುರಿಮರಿಯಾದಾತನ (ಯೇಸು) ವಿವಾಹಕಾಲ ಬಂದಿರುವುದರಿಂದ ದೇವರನ್ನು ಘನಪಡಿಸೋಣ. ಕುರಿಮರಿಯಾದಾತನ ವಧು (ಸಭೆ) ತನ್ನನ್ನು ಸಿದ್ಧಪಡಿಸಿಕೊಂಡಿದ್ದಾಳೆ.


ನಿಮ್ಮ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ಈ ಚಿಂತೆಯು ದೇವರಿಂದ ಬಂದದ್ದು. ನಿಮ್ಮನ್ನು ಕ್ರಿಸ್ತನಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಕ್ರಿಸ್ತನೊಬ್ಬನೇ ನಿಮ್ಮ ಪತಿಯಾಗಿರಬೇಕು. ನಾನು ನಿಮ್ಮನ್ನು ಕ್ರಿಸ್ತನಿಗೆ ಆತನ ಶುದ್ಧ ವಧುವನ್ನಾಗಿ ಕೊಡಲು ಅಪೇಕ್ಷಿಸುತ್ತೇನೆ.


ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.


ಶೆಕೆಮನಿಗೆ ದೀನಳ ಮೇಲೆ ಪ್ರೀತಿಯುಂಟಾಗಿ ಆಕೆಯನ್ನು ಮದುವೆ ಮಾಡಿಕೊಳ್ಳಲು ಇಷ್ಟಪಟ್ಟನು. ಅವನು ತನ್ನನ್ನು ಮದುವೆಯಾಗಬೇಕೆಂದು ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.


ಆಗ ಆಕೆಯ ಗಂಡನು ಅವಳ ಬಳಿಗೆ ಹೋದನು; ಅವಳೊಂದಿಗೆ ಪ್ರೀತಿಯಿಂದ ಮಾತನಾಡಿ ಅವಳನ್ನು ಕರೆದುಕೊಂಡು ಬರಬೇಕೆಂಬುದು ಅವನ ಆಲೋಚನೆಯಾಗಿತ್ತು. ಆದ್ದರಿಂದ ಅವನು ತನ್ನ ಸೇವಕನೊಡನೆ ಎರಡು ಕತ್ತೆಗಳನ್ನೂ ತೆಗೆದುಕೊಂಡು ಹೋದನು. ಆ ಲೇವಿಯನು ಆಕೆಯ ತಂದೆಯ ಮನೆಗೆ ಬಂದನು. ಅವಳ ತಂದೆಯು ಆ ಲೇವಿಯನನ್ನು ನೋಡಿ ಅವನನ್ನು ಸ್ವಾಗತಿಸಲು ಮನೆಯ ಹೊರಗೆ ಬಂದನು. ಅವಳ ತಂದೆಗೆ ಬಹಳ ಸಂತೋಷವಾಯಿತು.


ಆಗ ರೂತಳು, “ನನ್ನ ಸ್ವಾಮೀ, ನೀವು ನನಗೆ ತುಂಬ ದಯೆ ತೋರಿದಿರಿ. ನಾನು ಕೇವಲ ಒಬ್ಬ ದಾಸಿ. ನಾನು ನಿಮ್ಮ ಒಬ್ಬ ದಾಸಿಯ ಸಮಾನಳಲ್ಲದಿದ್ದರೂ ನೀವು ಒಳ್ಳೆಯ ಮಾತುಗಳಿಂದ ನನಗೆ ಕನಿಕರ ತೋರಿದಿರಿ” ಎಂದು ತನ್ನ ಕೃತಜ್ಞತೆಯನ್ನು ಸೂಚಿಸಿದಳು.


ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”


ನಾನು ಹಿಂದಿನ ಕಾಲದಲ್ಲಿ ಮಾಡಿದಂತೆ ಮರುಭೂಮಿಗೆ ನಿಮ್ಮನ್ನು ನಡೆಸುವೆನು. ಆದರೆ ಇದು ಅನ್ಯಜನಾಂಗಗಳು ವಾಸಿಸುವ ಸ್ಥಳದಲ್ಲಿರುವುದು ಮತ್ತು ನಾನು ಎದುರುಬದುರಾಗಿ ನಿಂತು ನಿಮಗೆ ನ್ಯಾಯತೀರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು