Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:18 - ಪರಿಶುದ್ದ ಬೈಬಲ್‌

18 “ಆ ಸಮಯದಲ್ಲಿ ನಾನು ಇಸ್ರೇಲರಿಗೋಸ್ಕರವಾಗಿ ಅಡವಿಯ ಮೃಗಗಳೊಂದಿಗೂ ಆಕಾಶದ ಪಕ್ಷಿಗಳೊಂದಿಗೂ ನೆಲದ ಮೇಲೆ ಹರಿದಾಡುವ ಜಂತುಗಳೊಂದಿಗೂ ಒಡಂಬಡಿಕೆ ಮಾಡುವೆನು. ನಾನು ಯುದ್ಧದ ಆಯುಧ, ಬಿಲ್ಲು, ಖಡ್ಗಗಳನ್ನು ತುಂಡು ಮಾಡುವೆನು. ಆ ದೇಶದೊಳಗೆ ಯಾವ ಆಯುಧವೂ ಇರದು. ಆಗ ಇಸ್ರೇಲಿನ ಜನರು ನಿಶ್ಟಿಂತೆಯಿಂದ ಮಲಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ದಿನಗಳಲ್ಲಿ ನನ್ನ ಜನರಿಗೆ ಹಾನಿಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ನೆಲದ ಕ್ರಿವಿುಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲುಕತ್ತಿಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:18
27 ತಿಳಿವುಗಳ ಹೋಲಿಕೆ  

“ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು.


ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.”


ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.


ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು.


ತೋಳಗಳೂ ಕುರಿಮರಿಗಳೂ ಒಟ್ಟಾಗಿ ಮೇಯುವವು. ಸಿಂಹಗಳು ದನಕುರಿಗಳಂತೆ ಹುಲ್ಲನ್ನು ಮೇಯುತ್ತವೆ. ವಿಷದ ಹಾವುಗಳು ಕೇವಲ ಮಣ್ಣನ್ನೇ ತಿನ್ನುತ್ತವೆ. ನನ್ನ ಪವಿತ್ರಪರ್ವತದಲ್ಲಿ ಅವು ಯಾರಿಗೂ ಕೇಡುಮಾಡುವುದಿಲ್ಲ; ಯಾರಿಗೂ ಭಯ ಹುಟ್ಟಿಸುವುದಿಲ್ಲ.” ಇವು ಯೆಹೋವನ ನುಡಿಗಳು.


ನೀನು ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವೆ; ಕಾಡುಮೃಗಗಳೂ ನಿನ್ನೊಂದಿಗೆ ಸಮಾಧಾನದಿಂದಿರುತ್ತವೆ.


ಆ ಸಮಯದಲ್ಲಿ ಯೆಹೋವನು ಇಡೀ ಭೂಲೋಕದ ಅರಸನಾಗುವನು. ಆತನು ಒಬ್ಬನೇ. ಆತನ ಹೆಸರು ಒಂದೇ.


ಅದೇ ಸಮಯದಲ್ಲಿ ಜೆರುಸಲೇಮಿಗೆ ಪೂರ್ವದಲ್ಲಿರುವ ಆಲೀವ್ ಮರಗಳ ಬೆಟ್ಟದ ಮೇಲೆ ನಿಂತುಕೊಳ್ಳುವನು. ಆ ಬೆಟ್ಟವು ಇಬ್ಭಾಗವಾಗುವದು. ಅದರ ಒಂದು ಭಾಗವು ಉತ್ತರಕ್ಕೆ ಹೋಗುವದು, ಇನ್ನೊಂದು ಭಾಗವು ದಕ್ಷಿಣದ ಕಡೆಗೆ ಹೋಗುವದು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಆ ದಿವಸಗಳಲ್ಲಿ ಜನರು ತಮ್ಮ ಸ್ನೇಹಿತರೊಂದಿಗೆ ಕುಳಿತುಕೊಂಡು ಸಂಭಾಷಿಸುವರು. ಅಂಜೂರದ ಮರದ ನೆರಳಿನಲ್ಲಿಯೂ ದ್ರಾಕ್ಷಿತೋಟಗಳ ನೆರಳಿನಲ್ಲಿಯೂ ಕುಳಿತುಕೊಂಡು ಮಾತನಾಡಲು ಪರಸ್ಪರ ಆಮಂತ್ರಿಸುವರು.”


ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಜೆರುಸಲೇಮಿನಲ್ಲಿ ಜನರು ಸುರಕ್ಷಿತರಾಗಿರುವರು. ಆ ‘ಮೊಳಕೆಯ’ ಹೆಸರು ‘ಯೆಹೋವನು ಒಳ್ಳೆಯವನು.’”


ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.


ಆ ಸಮಯದಲ್ಲಿ ಜನರು ಈ ಹಾಡನ್ನು ಯೆಹೂದದಲ್ಲಿ ಹಾಡುವರು: ಯೆಹೋವನು ನಮಗೆ ರಕ್ಷಣೆಯನ್ನು ಕೊಡುತ್ತಾನೆ. ನಮಗೆ ಬಲವಾದ ಪಟ್ಟಣವಿದೆ. ಅದಕ್ಕೆ ಬಲವಾದ ಗೋಡೆಗಳೂ ಕೋಟೆಗಳೂ ಇವೆ.


ಆ ಸಮಯದಲ್ಲಿ ಜನರು ತಮ್ಮ ಅಹಂಕಾರವನ್ನು ತೋರಿಸುವುದಿಲ್ಲ. ಈಗ ಅಹಂಕಾರಿಗಳಾಗಿರುವವರು ನೆಲದತನಕ ಬಗ್ಗಿಹೋಗುವರು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.


ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.


ಆತನು ನನ್ನನ್ನು ಹಸಿರುಗಾವಲುಗಳಲ್ಲಿ ತಂಗಿಸುವನು. ಪ್ರಶಾಂತವಾದ ನೀರಿನ ತೊರೆಗಳ ಬಳಿಯಲ್ಲಿ ನನ್ನನ್ನು ನಡೆಸುವನು.


ಅರಸನು ಹೀಗೆನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.


ನಾಶನಕ್ಕೂ ಬರಗಾಲಕ್ಕೂ ನೀನು ನಗುವೆ. ನೀನು ಕ್ರೂರಪ್ರಾಣಿಗಳಿಗೆ ಭಯಪಡುವ ಅಗತ್ಯವಿಲ್ಲ!


ಆತನು ಎಲ್ಲಾ ಕಾಡುಪ್ರಾಣಿಗಳನ್ನೂ ಪಶುಗಳನ್ನೂ ಕ್ರಿಮಿಕೀಟಗಳನ್ನೂ ಪಕ್ಷಿಗಳನ್ನೂ ಸೃಷ್ಟಿಮಾಡಿದನು.


ನನ್ನ ಜನರು ಮನೋಹರವಾಗಿರುವ ಶಾಂತಿಮಯವಾದ ಭೂಮಿಯಲ್ಲಿಯೂ ಸುರಕ್ಷಿತವಾದ ಗುಡಾರಗಳಲ್ಲಿಯೂ ಪ್ರಶಾಂತವಾದ ಮತ್ತು ನಿಶಬ್ದವಾದ ಸ್ಥಳಗಳಲ್ಲಿಯೂ ವಾಸಿಸುವರು.


“ನರಪುತ್ರನೇ, ನನ್ನ ಪರವಾಗಿ ಗೋಗನಿಗೆ ವಿರುದ್ಧವಾಗಿ ಹೇಳು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆಂದು ಅವನಿಗೆ ಹೇಳು: ‘ಗೋಗನೇ, ನೀನು ಮೆಷೆಕ್ ಮತ್ತು ತೂಬಲ್ ದೇಶಗಳ ಪ್ರಮುಖ ನಾಯಕನು. ಆದರೆ ನಾನು ನಿನಗೆ ವಿರುದ್ಧವಾಗಿದ್ದೇನೆ.


ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು ‘ಇಡೀ ಭೂಲೋಕದ ದೇವರು’ ಎಂದು ಕರೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು