Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:19 - ಪರಿಶುದ್ದ ಬೈಬಲ್‌

19 ಆಗ ನಾನು (ಯೆಹೋವನು) ನಿನ್ನನ್ನು ಒಳ್ಳೆಯತನದಿಂದಲೂ ನ್ಯಾಯದಿಂದಲೂ ಪ್ರೀತಿಯಿಂದಲೂ ಕರುಣೆಯಿಂದಲೂ ಕೂಡಿರುವ ನಿರಂತರವಾದ ವಧುವನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ನಿನ್ನನ್ನು ಶಾಶ್ವತವಾಗಿ ವರಿಸುವೆನು; ಹೌದು, ನೀತಿ, ನ್ಯಾಯ, ಪ್ರೀತಿ ಮತ್ತು ದಯೆಗಳಿಂದ ನಿನ್ನನ್ನು ವರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನನ್ನವಳನ್ನಾಗಿ ಮಾಡಿಕೊಳ್ಳುವೆನು ನಿನ್ನನ್ನು ಅನವರತ ನಿನ್ನ ವರಿಸುವೆನು ಕರುಣೆಯಿಂದ, ನೀತಿನ್ಯಾಯದಿಂದ, ನಿಶ್ಚಲ ಪ್ರೀತಿಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ನಿನ್ನನ್ನು ಶಾಶ್ವತವಾಗಿ ವರಿಸುವೆನು; ಹೌದು, ನೀತಿನ್ಯಾಯ ಪ್ರೀತಿದಯೆಗಳಿಂದ ನಿನ್ನನ್ನು ವರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿನ್ನನ್ನು ನನಗೆ ಸದಾಕಾಲಕ್ಕೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ನೀತಿಯಿಂದಲೂ, ನ್ಯಾಯದಿಂದಲೂ, ಪ್ರೀತಿಯಿಂದಲೂ, ಅನುಕಂಪದಿಂದಲೂ, ನಿನ್ನನ್ನು ನನಗೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:19
27 ತಿಳಿವುಗಳ ಹೋಲಿಕೆ  

ನಿಮ್ಮ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ಈ ಚಿಂತೆಯು ದೇವರಿಂದ ಬಂದದ್ದು. ನಿಮ್ಮನ್ನು ಕ್ರಿಸ್ತನಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಕ್ರಿಸ್ತನೊಬ್ಬನೇ ನಿಮ್ಮ ಪತಿಯಾಗಿರಬೇಕು. ನಾನು ನಿಮ್ಮನ್ನು ಕ್ರಿಸ್ತನಿಗೆ ಆತನ ಶುದ್ಧ ವಧುವನ್ನಾಗಿ ಕೊಡಲು ಅಪೇಕ್ಷಿಸುತ್ತೇನೆ.


ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.


ನೀನು ಒಳ್ಳೆಯತನದಿಂದ ಕಟ್ಟಲ್ಪಡುವೆ. ಆದ್ದರಿಂದ ಎಲ್ಲಾ ದುಷ್ಟತ್ವಗಳಿಂದ ನೀನು ಸುರಕ್ಷಿತಳಾಗಿರುವೆ. ನೀನು ಯಾವುದಕ್ಕೂ ಹೆದರುವ ಅವಶ್ಯವಿಲ್ಲ. ಯಾವುದೂ ನಿನಗೆ ಹಾನಿಮಾಡದು.


ದೇವರ ನಿಜಪ್ರೀತಿಯು ಆತನ ಭಕ್ತರನ್ನು ಸಂಧಿಸುತ್ತದೆ. ನೀತಿಯೂ ಸಮಾಧಾನವೂ ಅವರಿಗೆ ಮುದ್ದಿಡುತ್ತವೆ.


ನನ್ನ ಸಹೋದರ ಸಹೋದರಿಯರೇ, ಇದೇ ರೀತಿಯಲ್ಲಿ ನಿಮ್ಮ ಹಳೆಯ ಸ್ವಭಾವವು ಸತ್ತುಹೋಯಿತು; ನೀವು ಕ್ರಿಸ್ತನ ದೇಹದ ಮೂಲಕ ಧರ್ಮಶಾಸ್ತ್ರದಿಂದ ಬಿಡುಗಡೆಯಾದಿರಿ. ಈಗ ನೀವು, ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಾತನಿಗೆ ಸೇರಿದವರಾಗಿದ್ದೀರಿ. ನಾವು ದೇವರಿಗೋಸ್ಕರ ಫಲವನ್ನು ಫಲಿಸುವುದಕ್ಕಾಗಿ ಕ್ರಿಸ್ತನಿಗೆ ಸೇರಿದವರಾಗಿದ್ದೇವೆ.


ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.


ನಾನು ಇಸ್ರೇಲ್ ಜನಾಂಗದವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ಅನಂತರ ನಾನು ಎಂದಿಗೂ ಅವರಿಗೆ ವಿಮುಖನಾಗಿರುವದಿಲ್ಲ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ದೇವರು ಒಳ್ಳೆಯವನು; ನ್ಯಾಯವನ್ನೇ ಮಾಡುವವನು; ಆತನು ಚೀಯೋನನ್ನೂ ತನ್ನ ಬಳಿಗೆ ಬರುವ ಜನರನ್ನೂ ರಕ್ಷಿಸಿ ಕಾಪಾಡುವನು.


ಆದರೆ ಯೆಹೂದದಲ್ಲಿ ಯಾವಾಗಲೂ ಜನರು ವಾಸಿಸುವರು. ಅನೇಕ ತಲೆಮಾರಿನವರೆಗೆ ಜನರು ಜೆರುಸಲೇಮಿನಲ್ಲಿ ವಾಸಿಸುವರು.


ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು ‘ಇಡೀ ಭೂಲೋಕದ ದೇವರು’ ಎಂದು ಕರೆಯುವರು.


ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


“ನೀನು ಗಂಡಬಿಟ್ಟ ಹೆಂಗಸಿನಂತಿದ್ದಿ. ನಿನ್ನ ಆತ್ಮದಲ್ಲಿ ನೀನು ತುಂಬಾ ದುಃಖಿತಳಾಗಿದ್ದಿ. ಆದರೆ ಯೆಹೋವನು ನಿನ್ನನ್ನು ತನ್ನವಳನ್ನಾಗಿ ಮಾಡಲು ಕರೆದನು. ಎಳೇ ಪ್ರಾಯದಲ್ಲಿ ಮದುವೆಯಾದ ಮತ್ತು ಗಂಡಬಿಟ್ಟ ಹೆಂಗಸಿನಂತೆ ನೀನಿದ್ದಿ. ಆದರೆ ದೇವರು ತನ್ನವಳನ್ನಾಗಿ ಮಾಡಿಕೊಳ್ಳಲು ನಿನ್ನನ್ನು ಕರೆದನು.”


ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಯೆಹೋವನು ಹೇಳುವುದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು