2 “ನಿಮ್ಮ ತಾಯಿಯೊಂದಿಗೆ ವಾದಿಸಿರಿ. ಯಾಕೆಂದರೆ ಆಕೆ ನನ್ನ ಹೆಂಡತಿಯಲ್ಲ. ನಾನು ಆಕೆಯ ಗಂಡನಲ್ಲ. ವೇಶ್ಯೆಯ ಹಾಗೆ ಆಕೆ ವರ್ತಿಸುವದನ್ನು ನಿಲ್ಲಿಸು ಎಂದು ಹೇಳಿರಿ. ಆಕೆಯ ಸ್ತನಗಳ ಮಧ್ಯದಿಂದ ಆಕೆಯ ಪ್ರಿಯತಮರನ್ನು ತೆಗೆದುಹಾಕಲು ಹೇಳಿರಿ.
2 “ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ. ಅವಳು ವ್ಯಭಿಚಾರವನ್ನು ತನ್ನ ಮುಖಸೌಂದರ್ಯದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ.
2 ಮಕ್ಕಳೇ, ವಾದಿಸಿರಿ; ನಿಮ್ಮ ತಾಯಿಯೊಡನೆ ವಾದಿಸಿರಿ. ಅವಳು ನನ್ನ ಪತ್ನಿಯಲ್ಲ, ನಾನು ಅವಳ ಪತಿಯಲ್ಲ. ತನ್ನ ಮುಖದಿಂದ ವೇಶ್ಯಾಚಾರದ ಸೋಗನ್ನೂ ಸ್ತನಮಧ್ಯದಿಂದ ವ್ಯಭಿಚಾರದ ಬೆಡಗನ್ನೂ ತ್ಯಜಿಸಲಿ.
2 ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ. ನಾನು ಅವಳ ಗಂಡನಲ್ಲ; ಅವಳು ಸೂಳೆತನವನ್ನು ತನ್ನ ಮುಖದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ;
2 “ನಿಮ್ಮ ತಾಯಿಯ ಸಂಗಡ ವಾದಮಾಡಿರಿ, ಅವಳೊಂದಿಗೆ ವಾದಮಾಡಿರಿ, ಏಕೆಂದರೆ ಅವಳು ನನ್ನ ಹೆಂಡತಿಯಲ್ಲ, ಮತ್ತು ನಾನು ಅವಳ ಗಂಡನಲ್ಲ. ಅವಳು ತನ್ನ ವ್ಯಭಿಚಾರದ ನೋಟವನ್ನು ಮತ್ತು ತನ್ನ ಸ್ತನಗಳ ಮಧ್ಯದಿಂದ ಅಪನಂಬಿಗಸ್ತಿಕೆಯನ್ನು ತ್ಯಜಿಸಲಿ.
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.
“ನೀತಿವಂತರು ಅವರನ್ನು ವ್ಯಭಿಚಾರ ಮಾಡಿದ ಮತ್ತು ಕೊಲೆ ಮಾಡಿದ ಅಪರಾಧಿಗಳೆಂದು ತೀರ್ಪು ನೀಡುವರು. ಯಾಕೆಂದರೆ, ಒಹೊಲ ಮತ್ತು ಒಹೊಲೀಬಳ ವ್ಯಭಿಚಾರವನ್ನು ಆಚರಣೆ ಮಾಡುತ್ತಾರೆ ಮತ್ತು ರಕ್ತವು ಅವರ ಕೈಗಳ ಮೇಲಿದೆ.”
‘ನೀವು ನಿಮ್ಮ ಪಾಪವನ್ನು ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಬೇರೆ ರಾಷ್ಟ್ರದವರ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ನನ್ನ ಆಜ್ಞೆಯನ್ನು ಪರಿಪಾಲಿಸಲಿಲ್ಲ’” ಇದು ಯೆಹೋವನ ನುಡಿಯಾಗಿತ್ತು.
ಪ್ರತೀ ರಸ್ತೆಯ ಪ್ರಾರಂಭದಲ್ಲಿ ಅಂಥಾ ಪೂಜಾಸ್ಥಳಗಳನ್ನು ನಿರ್ಮಿಸಿದ್ದೀ. ನೀನು ನಿನ್ನ ಸೌಂದರ್ಯವನ್ನು ಹಾಳುಮಾಡಿಕೊಂಡಿ. ನೀನು ಅಸಹ್ಯವಾದ ಕಾರ್ಯಗಳನ್ನು ಮಾಡಲು ನಿನ್ನ ಸೌಂದರ್ಯವನ್ನು ಬಳಸಿಕೊಂಡೆ. ಹಾದಿಯಲ್ಲಿ ಹೋಗುವ ಪ್ರತಿಯೊಬ್ಬ ಗಂಡಸಿಗೂ ನೀನು ಲೈಂಗಿಕ ತೃಪ್ತಿ ನೀಡಿ ನಿನ್ನ ಸೂಳೆತನವನ್ನು ಹೆಚ್ಚಿಸಿಕೊಂಡೆ.
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.
ಅವರ ತಾಯಿಯು ವೇಶ್ಯೆಯಂತೆ ವರ್ತಿಸಿದಳು. ತಾನು ನಡಿಸಿದ ಕೃತ್ಯಗಳಿಗಾಗಿ ಆಕೆ ನಾಚಿಕೆಪಡಬೇಕು. ಆಕೆಯು ಹೀಗೆಂದುಕೊಳ್ಳುತ್ತಿದ್ದಾಳೆ, ‘ನಾನು ನನ್ನ ಪ್ರಿಯತಮರ ಬಳಿಗೆ ಹೋಗುವೆನು. ಅವರು ನನಗೆ ಅನ್ನ ನೀರನ್ನು ಕೊಡುವರು. ನನಗೆ ಉಣ್ಣೆಯನ್ನೂ, ನಾರುಮಡಿಯನ್ನೂ ಕೊಡುವರು. ದ್ರಾಕ್ಷಾರಸ ಮತ್ತು ಆಲೀವ್ ಎಣ್ಣೆಯನ್ನೂ ಕೊಡುವರು.’
ಹೋಶೇಯನಿಗೆ ಯೆಹೋವನಿಂದ ಬಂದ ಸಂದೇಶದಲ್ಲಿ ಇದು ಮೊದಲನೆಯದು. ಯೆಹೋವನು ಹೇಳಿದ್ದೇನೆಂದರೆ, “ನೀನು ಹೋಗಿ ಒಬ್ಬ ವೇಶ್ಯೆಯನ್ನು ಮದುವೆಯಾಗು. ಆ ವೇಶ್ಯೆಯಿಂದ ಮಕ್ಕಳನ್ನು ಪಡೆದುಕೊ. ಯಾಕೆಂದರೆ ಈ ದೇಶದ ಜನರು ಸೂಳೆಯಂತೆ ವರ್ತಿಸಿರುತ್ತಾರೆ. ಅವರು ಯೆಹೋವನಿಗೆ ಅಪನಂಬಿಗಸ್ತಿಕೆಯುಳ್ಳವರಾಗಿರುತ್ತಾರೆ.”
ನಿನ್ನ ಜೊತೆಯಲ್ಲಿದ್ದ ಜನರಿಗೆ ಹೇಳು, ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಇಸ್ರೇಲರ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಈ ಸ್ಥಳಕ್ಕೆ ಒಂದು ಭಯಂಕರವಾದ ಕೇಡನ್ನು ಉಂಟುಮಾಡುವೆನು. ಅದರ ಬಗ್ಗೆ ಕೇಳಿದ ಪ್ರತಿಯೊಬ್ಬ ವ್ಯಕ್ತಿಯು ವಿಸ್ಮಯಪಡುವನು ಮತ್ತು ಭಯಪಡುವನು.
ಹೀಗಿರಲಾಗಿ, ಲೋಕವು ಜನರ ವಿಷಯವಾಗಿ ಯೋಚಿಸುವಂತೆ ಇಂದಿನಿಂದ ನಾವು ಯಾರ ಬಗ್ಗೆಯೂ ಯೋಚಿಸುವುದಿಲ್ಲ. ಲೋಕವು ಯೋಚಿಸುವಂತೆ ಹಿಂದಿನ ಕಾಲದಲ್ಲಿ ನಾವು ಕ್ರಿಸ್ತನ ಬಗ್ಗೆ ಯೋಚಿಸಿಕೊಂಡಿದ್ದೆವು. ಆದರೆ ಈಗ ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ.
ದೇವರು ಹೇಳಿದ್ದೇನೆಂದರೆ, “ನನ್ನ ಮಕ್ಕಳಾಗಿದ್ದ ನಿನ್ನ ಪುತ್ರಪುತ್ರಿಯರನ್ನು ನೀನು ತೆಗೆದುಕೊಂಡು ಅವರನ್ನು ಆಹಾರವನ್ನಾಗಿ ವಿಗ್ರಹಗಳಿಗೆ ಯಜ್ಞ ಅರ್ಪಿಸಿದೆ. ನಿನ್ನ ಸೂಳೆತನವು ಸಾಕಾಗಿರಲಿಲ್ಲವೇ?
“ಯೆರೆಮೀಯನೇ, ಹೋಗಿ ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: “ಯೆಹೋವನು ಹೀಗೆನ್ನುತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; ಯುವತಿಯಾದ ಮದುಮಗಳಂತೆ ನನ್ನನ್ನು ಹಿಂಬಾಲಿಸಿದಿರಿ. ಎಂದೂ ಬೇಸಾಯಕ್ಕೆ ಬಳಸದ ಭೂಮಿಯಲ್ಲಿಯೂ ಮರಳುಗಾಡಿನಲ್ಲಿಯೂ ನನ್ನನ್ನು ಹಿಂಬಾಲಿಸಿದಿರಿ.
ಎಷ್ಟು ಗಟ್ಟಿಯಾಗಿ ಆರ್ಭಟಿಸಬಹುದೋ ಅಷ್ಟು ಆರ್ಭಟಿಸಿರಿ, ನಿಲ್ಲಿಸಬೇಡಿರಿ. ತುತ್ತೂರಿಯಂತೆ ಗಟ್ಟಿಯಾಗಿ ಕಿರುಚಿರಿ. ಜನರು ಮಾಡಿದ ಪಾಪಗಳನ್ನು ಅವರಿಗೆ ತಿಳಿಸಿರಿ. ಯಾಕೋಬನ ವಂಶದವರಿಗೆ ಅವರ ಪಾಪಗಳನ್ನು ತಿಳಿಸಿರಿ.
ದೇವರು ಜನಾಂಗಗಳಿಗೆ ಒಂದು ಗುರುತಾಗಿ ಧ್ವಜವನ್ನೆತ್ತುವನು. ಇಸ್ರೇಲ್ ಮತ್ತು ಯೆಹೂದದ ಜನರು ತಮ್ಮ ಸ್ಥಳಗಳಿಂದ ಕಡ್ಡಾಯವಾಗಿ ತೆಗೆದುಹಾಕಲ್ಪಡುವರು. ಆ ಜನರು ಪ್ರಪಂಚದ ಬಹುದೂರದ ಸ್ಥಳಗಳಿಗೆ ಚದರಿ ಹೋಗುವರು. ಆದರೆ ದೇವರು ಅವರನ್ನು ಒಟ್ಟಾಗಿ ಸೇರಿಸುವನು.
ಆಗ ಒಡೆದುಹಾಕುವವನು ಜನಗಳ ಮುಂದೆ ಮುನ್ನುಗ್ಗಿ ಹೋಗಿ, ದ್ವಾರಗಳನ್ನು ಒಡೆದುಹಾಕಿದಾಗ ಜನರು ಪಟ್ಟಣವನ್ನು ಬಿಟ್ಟುಹೋಗುವರು. ಅವರು ತಮ್ಮ ರಾಜನನ್ನೂ ಕರ್ತನನ್ನೂ ಹಿಂಬಾಲಿಸಿಕೊಂಡು ಅಲ್ಲಿಂದ ಹೋಗುವರು.