ಹೋಶೇಯ 2:21 - ಪರಿಶುದ್ದ ಬೈಬಲ್21 ಆಗ ನಾನು ನಿನಗೆ ಪ್ರತಿಕ್ರಿಯೆ ತೋರ್ಪಡಿಸುವೆನು.” ಇದು ಯೆಹೋವನು ಹೇಳಿದ ಮಾತು: “ನಾನು ಆಕಾಶದೊಂದಿಗೆ ಮಾತಾಡಲು ಅದು ಭೂಮಿಯ ಮೇಲೆ ಮಳೆಗರೆಯುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು; ಬೇಡುವ ಆಕಾಶಕ್ಕೆ ನಾನು ಒಲಿಯಲು ಬೇಡುವ ಭೂವಿುಗೆ ಅದು ಒಲಿಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಆ ದಿವಸಗಳಲ್ಲಿ, ನಾನು ಕೇಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಆಕಾಶಗಳನ್ನು ಕೇಳುವೆನು. ಅವು ಭೂಮಿಯನ್ನು ಕೇಳುವುವು. ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.