ಹೋಶೇಯ 2:4 - ಪರಿಶುದ್ದ ಬೈಬಲ್4 ಆಕೆಯ ಮಕ್ಕಳನ್ನು ನಾನು ಕನಿಕರಿಸೆನು. ಯಾಕೆಂದರೆ ಅವರು ವ್ಯಭಿಚಾರದಿಂದ ಹುಟ್ಟಿದ ಮಕ್ಕಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವಳ ಮಕ್ಕಳನ್ನೂ ಕರುಣಿಸುವುದಿಲ್ಲ, ಅವರು ವ್ಯಭಿಚಾರದಿಂದ ಹುಟ್ಟಿದ ಮಕ್ಕಳಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವಳ ಮಕ್ಕಳಿಗೂ ಕರುಣೆಯನ್ನು ತೋರಿಸೆನು; ಅವರು ವ್ಯಭಿಚಾರದಿಂದ ಹುಟ್ಟಿದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವಳ ಮಕ್ಕಳನ್ನೂ ಕರುಣಿಸೆನು, ಅವರು ವ್ಯಭಿಚಾರದಿಂದಾದ ಮಕ್ಕಳಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನು ಅವಳ ಮಕ್ಕಳಿಗೂ ಸಹ ಪ್ರೀತಿ ತೋರಿಸುವುದಿಲ್ಲ. ಏಕೆಂದರೆ ಅವರು ವ್ಯಭಿಚಾರದ ಮಕ್ಕಳಾಗಿದ್ದಾರೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ.
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.