Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:5 - ಪರಿಶುದ್ದ ಬೈಬಲ್‌

5 ಅವರ ತಾಯಿಯು ವೇಶ್ಯೆಯಂತೆ ವರ್ತಿಸಿದಳು. ತಾನು ನಡಿಸಿದ ಕೃತ್ಯಗಳಿಗಾಗಿ ಆಕೆ ನಾಚಿಕೆಪಡಬೇಕು. ಆಕೆಯು ಹೀಗೆಂದುಕೊಳ್ಳುತ್ತಿದ್ದಾಳೆ, ‘ನಾನು ನನ್ನ ಪ್ರಿಯತಮರ ಬಳಿಗೆ ಹೋಗುವೆನು. ಅವರು ನನಗೆ ಅನ್ನ ನೀರನ್ನು ಕೊಡುವರು. ನನಗೆ ಉಣ್ಣೆಯನ್ನೂ, ನಾರುಮಡಿಯನ್ನೂ ಕೊಡುವರು. ದ್ರಾಕ್ಷಾರಸ ಮತ್ತು ಆಲೀವ್ ಎಣ್ಣೆಯನ್ನೂ ಕೊಡುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರ ತಾಯಿ ವೇಶ್ಯೆಯಾಗಿದ್ದಾಳೆ. ಲಜ್ಜೆಗೆಟ್ಟ ಹೆಂಗಸಾಗಿ ವರ್ತಿಸಿದ್ದಾಳೆ. ‘ನನಗೆ ಅನ್ನಪಾನ, ಉಣ್ಣೆ ಉಡಿಗೆ, ಎಣ್ಣೆತೈಲ, ಪಾಯಸಪಾನಕಗಳನ್ನು ಕೊಡುವಂಥ ನಲ್ಲರ ಹಿಂದೆ ಹೋಗುವೆನು’ ಎಂದುಕೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರ ತಾಯಿಯು ಸೂಳೆತನ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ; ನನಗೆ ಬೇಕಾದ ಅನ್ನಪಾನಗಳನ್ನೂ ಉಣ್ಣೆನಾರುಗಳನ್ನೂ ತೈಲವನ್ನೂ ಪಾಯಸ ಪಾನಕಗಳನ್ನೂ ನನಗೆ ಕೊಡುವ ನನ್ನ ವಿುಂಡರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರ ತಾಯಿ ವಿಶ್ವಾಸದ್ರೋಹಿ ಮತ್ತು ಅವಮಾನಕರವಾಗಿ ಅವರನ್ನು ಗರ್ಭಧರಿಸಿದ್ದಾರೆ. ಅವಳು, ‘ನನಗೆ ನನ್ನ ಅನ್ನಪಾನ, ನನ್ನ ಉಣ್ಣೆ ಮತ್ತು ನನ್ನ ನಾರಿನ ಉಡುಗೆ, ನನ್ನ ತೈಲ, ನನ್ನ ಪಾಯಸಪಾನಕಗಳನ್ನು ಕೊಡುವಂಥ ನನ್ನ ಪ್ರೇಮಿಗಳ ಹಿಂದೆ ಹೋಗುವೆನು,’ ಎಂದುಕೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:5
33 ತಿಳಿವುಗಳ ಹೋಲಿಕೆ  

ತಿರುಗಿ ಯೆಹೋವನು ನನಗೆ ಮತ್ತೆ ಹೇಳಿದ್ದೇನೆಂದರೆ, “ಗೋಮೆರಳಿಗೆ ಅನೇಕ ಪ್ರಿಯತಮರಿದ್ದಾರೆ, ಆದರೆ ನೀನು ಆಕೆಯನ್ನು ಪ್ರೀತಿ ಮಾಡುತ್ತಲೇ ಇರಬೇಕು. ಯಾಕೆಂದರೆ ಅದು ಯೆಹೋವನ ರೀತಿ. ಯೆಹೋವನು ಇಸ್ರೇಲ್ ಜನರನ್ನು ಪ್ರೀತಿಸುತ್ತಲೇ ಇದ್ದಾನೆ. ಆದರೆ ಅವರು ಅನ್ಯದೇವರುಗಳನ್ನು ಆರಾಧಿಸುತ್ತಲೇ ಇದ್ದಾರೆ. ಅವರು ಒಣದ್ರಾಕ್ಷಿಯ ಉಂಡೆಗಳನ್ನು ತಿನ್ನಲು ಆಶಿಸುತ್ತಾರೆ.”


“ಆಕೆಗೆ (ಇಸ್ರೇಲಿಗೆ) ನಾನು (ಯೆಹೋವನು) ಧಾನ್ಯ, ಎಣ್ಣೆ, ದ್ರಾಕ್ಷಾರಸವನ್ನು ಕೊಟ್ಟವನೆಂದು ತಿಳಿದಿಲ್ಲ. ಆಕೆಗೆ ಹೆಚ್ಚೆಚ್ಚಾಗಿ ಬೆಳ್ಳಿಬಂಗಾರಗಳನ್ನು ಕೊಡುತ್ತಾ ಬಂದೆನು. ಆದರೆ ಆ ಬೆಳ್ಳಿಬಂಗಾರವನ್ನು ಇಸ್ರೇಲ್ ಬಾಳನ ವಿಗ್ರಹಗಳನ್ನು ತಯಾರಿಸಲು ಉಪಯೋಗಿಸಿದಳು.


ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.


“ನನಗೆ ಇಸ್ರೇಲ್ ಜನಾಂಗವು ಮರುಭೂಮಿಯಲ್ಲಿ ದೊರಕಿದ ದ್ರಾಕ್ಷಿಹಣ್ಣಿನಂತಿತ್ತು. ನಿನ್ನ ಪೂರ್ವಿಕರು ಫಲಕಾಲದ ಆರಂಭದಲ್ಲಿ ದೊರೆತ ಅಂಜೂರದ ಹಣ್ಣಿನಂತಿದ್ದರು. ಆದರೆ ಅವರು ಬಾಳ್‌ಪೆಗೋರಿಗೆ ಬಂದಾಗ ಅವರು ಬದಲಾದರು. ಅವರು ಕೊಳೆತುಹೋದ ವಸ್ತುವಿನಂತೆ ಆದರು. ಅವರು ಪ್ರೀತಿಸಿದ ಭಯಂಕರ ವಿಗ್ರಹಗಳಂತೆ ಆದರು.


ಎಫ್ರಾಯೀಮನು ತನ್ನ ಪ್ರೇಮಿಗಳ ಬಳಿಗೆ ಹೋದನು. ಕಾಡುಕತ್ತೆಯಂತೆ ಅಶ್ಶೂರ್ಯದ ಕಡೆಗೆ ಅಡ್ಡಾಡುತ್ತಾ ಹೋದನು.


ನೀವು (ಯಾಜಕರು) ಹಗಲಿನಲ್ಲಿ ಬಿದ್ದುಹೋಗುವಿರಿ. ರಾತ್ರಿ ಹೊತ್ತಿನಲ್ಲಿ ಪ್ರವಾದಿಗಳೂ ನಿಮ್ಮ ಜೊತೆಗೆ ಬೀಳುವರು ಮತ್ತು ನಾನು ನಿಮ್ಮ ತಾಯಿಯನ್ನು ಸಹ ನಾಶಮಾಡುವೆನು.


“ನಿಮ್ಮ ತಾಯಿಯೊಂದಿಗೆ ವಾದಿಸಿರಿ. ಯಾಕೆಂದರೆ ಆಕೆ ನನ್ನ ಹೆಂಡತಿಯಲ್ಲ. ನಾನು ಆಕೆಯ ಗಂಡನಲ್ಲ. ವೇಶ್ಯೆಯ ಹಾಗೆ ಆಕೆ ವರ್ತಿಸುವದನ್ನು ನಿಲ್ಲಿಸು ಎಂದು ಹೇಳಿರಿ. ಆಕೆಯ ಸ್ತನಗಳ ಮಧ್ಯದಿಂದ ಆಕೆಯ ಪ್ರಿಯತಮರನ್ನು ತೆಗೆದುಹಾಕಲು ಹೇಳಿರಿ.


“ಯೆಹೂದದ ಜನರೇ, ನೀವು ಅನೇಕ ವಿಗ್ರಹಗಳನ್ನು ಇಟ್ಟುಕೊಂಡಿದ್ದೀರಿ. ಯೆಹೂದದಲ್ಲಿ ಎಷ್ಟು ಪಟ್ಟಣಗಳಿವೆಯೋ, ಅಷ್ಟು ವಿಗ್ರಹಗಳಿವೆ. ತುಚ್ಛ ದೇವರಾದ ಬಾಳನನ್ನು ಪೂಜಿಸಲು ನೀವು ಅನೇಕ ಬಲಿಪೀಠಗಳನ್ನು ಕಟ್ಟಿಕೊಂಡಿದ್ದೀರಿ. ಜೆರುಸಲೇಮಿನಲ್ಲಿ ಎಷ್ಟು ಬೀದಿಗಳಿವೆಯೋ ಅಷ್ಟು ಬಲಿಪೀಠಗಳಿವೆ.


“ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


ಫಿಲಿಷ್ಟಿಯ ಅಧಿಪತಿಗಳು ಒಂದು ಉತ್ಸವವನ್ನು ಮಾಡಲು ಸೇರಿಬಂದಿದ್ದರು. ಅವರು ತಮ್ಮ ದೇವರಾದ ದಾಗೋನನಿಗೆ ಒಂದು ಮಹಾಯಜ್ಞವನ್ನು ಸಮರ್ಪಿಸಬೇಕೆಂದಿದ್ದರು. “ನಮ್ಮ ಶತ್ರುವಾದ ಸಂಸೋನನನ್ನು ಸೋಲಿಸಲು ನಮ್ಮ ದೇವರು ನಮಗೆ ಸಹಾಯ ಮಾಡಿದನು” ಎಂದು ಅವರು ಭಾವಿಸಿದ್ದರು.


ಹೋಶೇಯನಿಗೆ ಯೆಹೋವನಿಂದ ಬಂದ ಸಂದೇಶದಲ್ಲಿ ಇದು ಮೊದಲನೆಯದು. ಯೆಹೋವನು ಹೇಳಿದ್ದೇನೆಂದರೆ, “ನೀನು ಹೋಗಿ ಒಬ್ಬ ವೇಶ್ಯೆಯನ್ನು ಮದುವೆಯಾಗು. ಆ ವೇಶ್ಯೆಯಿಂದ ಮಕ್ಕಳನ್ನು ಪಡೆದುಕೊ. ಯಾಕೆಂದರೆ ಈ ದೇಶದ ಜನರು ಸೂಳೆಯಂತೆ ವರ್ತಿಸಿರುತ್ತಾರೆ. ಅವರು ಯೆಹೋವನಿಗೆ ಅಪನಂಬಿಗಸ್ತಿಕೆಯುಳ್ಳವರಾಗಿರುತ್ತಾರೆ.”


ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನ್ನು ಕೇಳು. ನೀನು ಕೇಳದಿದ್ದರೆ ನಾನು ನಿನಗೆ ವಿಮುಖನಾಗುವೆ. ನಾನು ನಿನ್ನ ಪ್ರದೇಶವನ್ನು ಒಂದು ಮರಳುಗಾಡಾಗಿ ಮಾಡುತ್ತೇನೆ. ಅಲ್ಲಿ ಯಾರೂ ವಾಸಮಾಡಲು ಸಾಧ್ಯವಾಗದು.”


“ಇಂಥ ಕೇಡು ನನಗೆ ಏಕೆ ಉಂಟಾಯಿತು?” ಎಂದು ನಿನ್ನನ್ನು ನೀನೇ ಕೇಳಿಕೊಳ್ಳಬಹುದು. ನೀನು ಮಾಡಿದ ಅನೇಕ ಪಾಪಗಳ ಫಲದಿಂದಲೇ ಆಯಿತು. ನಿನ್ನ ಪಾಪಗಳ ಫಲವಾಗಿ ನಿನ್ನ ಲಂಗವನ್ನು ಹರಿಯಲಾಯಿತು. ನಿನ್ನ ಪಾದರಕ್ಷೆಯನ್ನು ಕಿತ್ತುಕೊಳ್ಳಲಾಯಿತು. ನಿನ್ನನ್ನು ಕಂಗೆಡಿಸುವದಕ್ಕಾಗಿ ಅವರು ಹೀಗೆ ಮಾಡಿದರು.


ಜೆರುಸಲೇಮೇ, ನೀನು ಹುಟ್ಟಿದ ಆ ದಿವಸದಲ್ಲಿ ನಿನ್ನ ಹೊಕ್ಕಳ ನಾಳವನ್ನು ಕೊಯ್ಯಲು ಯಾರೂ ಇದ್ದಿಲ್ಲ. ನಿನ್ನ ಮೈಯನ್ನು ನೀರು ಹಾಕಿ ಯಾರೂ ತೊಳೆದು ಶುದ್ಧಮಾಡಿಲ್ಲ. ನಿನ್ನನ್ನು ಯಾರೂ ಉಪ್ಪಿನಿಂದ ಉಜ್ಜಿಲ್ಲ. ಯಾರೂ ನಿನಗೆ ಬಟ್ಟೆ ಸುತ್ತಲಿಲ್ಲ.


ಸೂಳೆಯೇ, ಯೆಹೋವನ ಸಂದೇಶವನ್ನು ಕೇಳು:


ಆ ನಿನ್ನ ಪ್ರಿಯತಮರಿಗೆ ನಿನ್ನನ್ನು ಬಿಟ್ಟುಕೊಡುವೆನು. ಅವರು ನಿನ್ನ ದಿಬ್ಬಗಳನ್ನು ನಾಶಮಾಡುವರು ಮತ್ತು ಪೂಜಾಯಜ್ಞವೇದಿಕೆಗಳನ್ನು ಕೆಡವಿಹಾಕುವರು. ನಿನ್ನ ಬಟ್ಟೆಗಳನ್ನು ಕಿತ್ತುಕೊಳ್ಳುವರು ಮತ್ತು ಚಂದವಾದ ಆಭರಣಗಳನ್ನು ತೆಗೆದುಕೊಂಡು ಹೋಗುವರು. ಮತ್ತು ನಿನ್ನನ್ನು ಬೆತ್ತಲೆಯಾಗಿ ಮಾಡುವರು.


ಆ ಸಮಯದಲ್ಲಿ ಸುಂದರವಾದ ತರುಣತರುಣಿಯರು ದಾಹದಿಂದ ಬಳಲುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು