ಹೋಶೇಯ 2:7 - ಪರಿಶುದ್ದ ಬೈಬಲ್7 ಆಕೆಯು ತನ್ನ ಪ್ರಿಯತಮರ ಹಿಂದೆ ಓಡಿಹೋದರೂ ಅವರನ್ನು ಹಿಡಿಯಲಾರಳು. ಆಕೆಯು ತನ್ನ ಪ್ರಿಯತಮರನ್ನು ಹುಡುಕುವಳು. ಆದರೆ ಅವರು ಆಕೆಗೆ ಸಿಗುವುದಿಲ್ಲ. ಆಗ ಆಕೆ ಹೀಗೆ ಹೇಳುವಳು, ‘ನಾನು ನನ್ನ ಮೊದಲನೇ ಪತಿಯ ಬಳಿಗೆ (ಯೆಹೋವನು) ಹೋಗುವೆನು. ನಾನು ಆತನೊಂದಿಗೆ ಇದ್ದಾಗ ನನ್ನ ಜೀವಿತವು ಎಷ್ಟೋ ಚೆನ್ನಾಗಿತ್ತು. ಈಗಿನ ನನ್ನ ಜೀವಿತಕ್ಕಿಂತ ಆಗಿನ ಜೀವಿತವು ಎಷ್ಟೋ ಮೇಲಾಗಿತ್ತು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ. ಆಗ ಅವಳು, “‘ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು’ ಅಂದುಕೊಳ್ಳುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವಳು ತನ್ನ ನಲ್ಲರನ್ನು ಹಿಂದಟ್ಟಿ ಹೋದರೂ ಅವರನ್ನು ಸಂಧಿಸಲಾರಳು; ಅವರನ್ನು ಹುಡುಕಿದರೂ ಕಂಡುಹಿಡಿಯಲಾರಳು. ಆಗ ಅವಳು: ‘ನನ್ನನ್ನು ಮದುವೆಯಾದ ಪತಿಯ ಬಳಿಗೆ ಹಿಂತಿರುಗುವೆನು. ಈಗಿನ ಸ್ಥಿತಿಗಿಂತ ಆಗಿನ ಸ್ಥಿತಿಯೇ ಉತ್ತಮವಾಗಿತ್ತು’ ಎಂದುಕೊಳ್ಳುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವಳು ತನ್ನ ವಿುಂಡರನ್ನು ಹಿಂದಟ್ಟಿದರೂ ಅವರನ್ನು ಸಂಧಿಸಳು; ಅವರನ್ನು ಹುಡುಕಿದರೂ ಅವರು ಸಿಕ್ಕರು; ಆಗ ಅವಳು - ನನ್ನ ಮದುವೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು ಅಂದುಕೊಳ್ಳುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವಳು ತನ್ನ ಪ್ರೇಮಿಗಳನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವುದಿಲ್ಲ. ಹುಡುಕಿದರೂ ಅವರು ಸಿಕ್ಕುವುದಿಲ್ಲ. ಆಗ ಅವಳು ಹೀಗೆ ಎಂದುಕೊಳ್ಳುವಳು, ‘ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು. ಏಕೆಂದರೆ ಆಗ ನನ್ನ ಸ್ಥಿತಿ ಪ್ರಸ್ತುತ ಸ್ಥಿತಿಗಿಂತ ಉತ್ತಮವಾಗಿತ್ತು.’ ಅಧ್ಯಾಯವನ್ನು ನೋಡಿ |
ಅನಂತರ ನೆಬೂಕದ್ನೆಚ್ಚರನನ್ನು ಜನರ ಮಧ್ಯದಿಂದ ಓಡಿಸಲಾಯಿತು. ಅವನ ಬುದ್ಧಿಯು ಮೃಗಬುದ್ಧಿಯಂತಾಯಿತು. ಅವನು ಕಾಡುಕತ್ತೆಗಳ ಜೊತೆ ವಾಸಿಸಿದನು; ಹಸುಗಳಂತೆ ಹುಲ್ಲು ತಿಂದನು; ಮಂಜಿನಲ್ಲಿ ನೆನೆದನು. ಅವನಿಗೆ ಸರಿಯಾದ ಬುದ್ಧಿ ಬರುವತನಕ ಅವನು ಆ ಸ್ಥಿತಿಯಲ್ಲಿದ್ದನು. ಆಗ ಅವನು ಮಹೋನ್ನತನಾದ ದೇವರೇ ಮಾನವರ ಸಾಮ್ರಾಜ್ಯವನ್ನು ಆಳುತ್ತಾನೆ ಮತ್ತು ಆ ಸಾಮ್ರಾಜ್ಯಕ್ಕೆ ತನಗೆ ಬೇಕಾದವರನ್ನು ಅರಸರನ್ನಾಗಿ ನೇಮಿಸುತ್ತಾನೆ ಎಂಬುದನ್ನು ತಿಳಿದುಕೊಂಡನು.
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.
ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.
“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.
ದಮಸ್ಕದ ಜನರು ಆರಾಧಿಸುವ ಆ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, “ಅರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದ್ದರಿಂದ ನಾನು ಆ ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ಆ ದೇವರು ನನಗೂ ಸಹಾಯ ಮಾಡುವನು” ಎಂದುಕೊಂಡನು. ಆಹಾಜನು ಆ ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪಮಾಡುವದಕ್ಕೆ ಪ್ರೋತ್ಸಾಹಿಸಿದನು.
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.