Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:8 - ಪರಿಶುದ್ದ ಬೈಬಲ್‌

8 “ಆಕೆಗೆ (ಇಸ್ರೇಲಿಗೆ) ನಾನು (ಯೆಹೋವನು) ಧಾನ್ಯ, ಎಣ್ಣೆ, ದ್ರಾಕ್ಷಾರಸವನ್ನು ಕೊಟ್ಟವನೆಂದು ತಿಳಿದಿಲ್ಲ. ಆಕೆಗೆ ಹೆಚ್ಚೆಚ್ಚಾಗಿ ಬೆಳ್ಳಿಬಂಗಾರಗಳನ್ನು ಕೊಡುತ್ತಾ ಬಂದೆನು. ಆದರೆ ಆ ಬೆಳ್ಳಿಬಂಗಾರವನ್ನು ಇಸ್ರೇಲ್ ಬಾಳನ ವಿಗ್ರಹಗಳನ್ನು ತಯಾರಿಸಲು ಉಪಯೋಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವಳಿಗೆ ದವಸಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಕೊಟ್ಟವನು ನಾನೇ ಎಂಬುದನ್ನು ಅರಿತುಕೊಳ್ಳದೆಹೋದಳು. ನಾನು ಧಾರಾಳವಾಗಿ ಕೊಟ್ಟ ಬೆಳ್ಳಿಬಂಗಾರಗಳನ್ನು ಬಾಳನ ಪೂಜೆಗೆ ಉಪಯೋಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತನ್ನ ಧಾನ್ಯದ್ರಾಕ್ಷಾರಸತೈಲಗಳು ನನ್ನಿಂದ ದೊರೆತವುಗಳೆಂದೂ ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿ ಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಅವರು ಬಾಳನಿಗಾಗಿ ಉಪಯೋಗಿಸಿದ ಧಾನ್ಯ, ದ್ರಾಕ್ಷಾರಸ ಹಾಗೂ ಎಣ್ಣೆಯನ್ನು ನಾನೇ ಅವಳಿಗೆ ಕೊಟ್ಟು, ಬೆಳ್ಳಿಬಂಗಾರವನ್ನು ನಾನೇ ಧಾರಾಳವಾಗಿ ಹೆಚ್ಚಿಸಿದೆನೆಂದು ಅವಳು ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:8
27 ತಿಳಿವುಗಳ ಹೋಲಿಕೆ  

ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”


ಈಗ ಇಸ್ರೇಲರು ಹೆಚ್ಚೆಚ್ಚಾಗಿ ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು.


ಇಸ್ರೇಲರು ತಮಗಾಗಿ ಅರಸನನ್ನು ಆರಿಸಿಕೊಂಡರು. ಆದರೆ ಸಲಹೆಗಳಿಗಾಗಿ ನನ್ನ ಬಳಿಗೆ ಬರಲಿಲ್ಲ. ಇಸ್ರೇಲರು ತಮ್ಮ ನಾಯಕರನ್ನು ಆರಿಸಿಕೊಂಡರು. ಆದರೆ ನಾನು ತಿಳಿದಿರುವ ನಾಯಕರನ್ನು ಆರಿಸಿಕೊಳ್ಳಲಿಲ್ಲ. ಇಸ್ರೇಲರು ತಮಗೆ ವಿಗ್ರಹಗಳನ್ನು ತಯಾರಿಸಲು ತಮ್ಮ ಬೆಳ್ಳಿಬಂಗಾರವನ್ನು ಉಪಯೋಗಿಸಿದರು. ಆದ್ದರಿಂದ ಅವರು ನಾಶವಾಗುವರು.


“ಲೈಂಗಿಕಪಾಪ, ಗಡುಸಾದ ಮದ್ಯ ಮತ್ತು ಹೊಸ ದ್ರಾಕ್ಷಾರಸ ಇವುಗಳಿಂದ ವಿಚಾರಪ್ರಜ್ಞೆಯನ್ನು ಕಳೆದುಕೊಳ್ಳುವರು.


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


“ಆಗ ಕಿರಿಮಗನು ತನಗೆ ದೊರೆತ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿದನು. ಅಲ್ಲಿ ಅವನು ಪಟಿಂಗನಾಗಿ ಬದುಕಿ ತನ್ನ ಹಣವನ್ನೆಲ್ಲಾ ಹಾಳುಮಾಡಿಕೊಂಡನು.


ಅವನ ಬಲೆಗಳು ಅವನು ಧನಿಕನಂತೆ ಜೀವಿಸಲು ಸಹಾಯ ಮಾಡುವವು. ಅವನು ಒಳ್ಳೆಯ ಆಹಾರವನ್ನು ಉಣ್ಣುವನು. ಅದಕ್ಕೆ ವೈರಿಯು ತನ್ನ ಬಲೆಯನ್ನು ಆರಾಧಿಸುವನು. ಅವನು ಯಜ್ಞವನ್ನರ್ಪಿಸಿ ಧೂಪ ಹಾಕುವನು. ಬಲೆಯನ್ನು ಗೌರವಿಸುವನು.


ಅವರ ತಾಯಿಯು ವೇಶ್ಯೆಯಂತೆ ವರ್ತಿಸಿದಳು. ತಾನು ನಡಿಸಿದ ಕೃತ್ಯಗಳಿಗಾಗಿ ಆಕೆ ನಾಚಿಕೆಪಡಬೇಕು. ಆಕೆಯು ಹೀಗೆಂದುಕೊಳ್ಳುತ್ತಿದ್ದಾಳೆ, ‘ನಾನು ನನ್ನ ಪ್ರಿಯತಮರ ಬಳಿಗೆ ಹೋಗುವೆನು. ಅವರು ನನಗೆ ಅನ್ನ ನೀರನ್ನು ಕೊಡುವರು. ನನಗೆ ಉಣ್ಣೆಯನ್ನೂ, ನಾರುಮಡಿಯನ್ನೂ ಕೊಡುವರು. ದ್ರಾಕ್ಷಾರಸ ಮತ್ತು ಆಲೀವ್ ಎಣ್ಣೆಯನ್ನೂ ಕೊಡುವರು.’


ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.


ಯೆಹೂದದ ಜನರು ಹೀಗೆ ಮಾಡುತ್ತಿದ್ದಾರೆ; ಮಕ್ಕಳು ಸೌದೆಯನ್ನು ಆರಿಸುತ್ತಾರೆ. ತಂದೆಗಳು ಆ ಸೌಧೆಯಿಂದ ಬೆಂಕಿಯನ್ನು ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದಿ ಸ್ವರ್ಗದ ರಾಣಿಗಾಗಿ ಹೋಳಿಗೆಗಳನ್ನು ಮಾಡುತ್ತಾರೆ. ಈ ಯೆಹೂದದ ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ. ಅವರು ನನ್ನನ್ನು ರೇಗಿಸುವದಕ್ಕಾಗಿಯೇ ಹೀಗೆ ಮಾಡುತ್ತಾರೆ.


ಕೆಲವರು ಬೆಳ್ಳಿಬಂಗಾರಗಳಲ್ಲಿ ಐಶ್ವರ್ಯವಂತರಾಗಿದ್ದಾರೆ. ಅವರ ಕೈಚೀಲಗಳಿಂದ ಬಂಗಾರವು ಉದುರುತ್ತವೆ, ಅವರು ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗುತ್ತಾರೆ; ಕುಶಲಕರ್ಮಿಗಳಿಗೆ ಹಣಕೊಟ್ಟು ಮರದಿಂದ ವಿಗ್ರಹವನ್ನು ಮಾಡಿಸಿಕೊಳ್ಳುತ್ತಾರೆ. ಆಮೇಲೆ ಅವರು ಆ ವಿಗ್ರಹಕ್ಕೆ ಅಡ್ಡಬಿದ್ದು ಪೂಜೆ ಮಾಡುತ್ತಾರೆ.


ಶೆಕೆಮಿನ ಜನರು ದ್ರಾಕ್ಷಿಯನ್ನು ಕೊಯಿದುಕೊಂಡು ಬರಲು ತಮ್ಮ ಹೊಲಗಳಿಗೆ ಹೋದರು. ಆ ದ್ರಾಕ್ಷಿಯನ್ನು ಹಿಂಡಿ ದ್ರಾಕ್ಷಾರಸ ಮಾಡಿದರು. ಆಮೇಲೆ ತಮ್ಮ ದೇವರ ಮಂದಿರದಲ್ಲಿ ಒಂದು ಉತ್ಸವನ್ನು ಮಾಡಿದರು. ಆ ಜನರು ತಿಂದು ಕುಡಿದು, ಅಬೀಮೆಲೆಕನ ಬಗ್ಗೆ ಕೆಟ್ಟ ಮಾತುಗಳನ್ನು ಆಡಿದರು.


ಇಸ್ರೇಲ್ ಅಧಿಕ ಹಣ್ಣುಗಳನ್ನು ಕೊಡುವ ದ್ರಾಕ್ಷಿಬಳ್ಳಿಯಂತಿದೆ. ಆದರೆ ಇಸ್ರೇಲ್ ಅಭಿವೃದ್ಧಿ ಹೊಂದಿದ ಹಾಗೆ ಅವರು ಸುಳ್ಳುದೇವರುಗಳನ್ನು ಪೂಜಿಸಲು ಹೆಚ್ಚುಹೆಚ್ಚು ವೇದಿಕೆಗಳನ್ನು ಕಟ್ಟಿದರು. ಅವರ ದೇಶವು ಉತ್ತಮವಾಗುತ್ತಾ ಬರುತ್ತಿರುವಾಗ ಅವರು ತಮ್ಮ ಸುಳ್ಳುದೇವರುಗಳಿಗೆ ಉತ್ತಮ ಕಲ್ಲುಗಳಿಂದ ವೇದಿಕೆಗಳನ್ನು ಕಟ್ಟಲು ಪ್ರಾರಂಭಿಸಿದರು.


ನಿಮ್ಮ ದೇವರಾದ ಯೆಹೋವನನ್ನು ಜ್ಞಾಪಕಮಾಡಿಕೊಳ್ಳಿ. ಇವೆಲ್ಲಾ ಸಂಪಾದಿಸುವುದಕ್ಕೆ ಆತನೇ ನಿಮಗೆ ಶಕ್ತಿ ಕೊಟ್ಟನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಯೆಹೋವನು ನಿಮಗೆ ಹೀಗೆ ಮಾಡುವುದರ ಉದ್ದೇಶವೇನಾಗಿತ್ತು? ಆತನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು.


ನೀನು ಅಮೋಘವಾದ ಮಂಚದಲ್ಲಿ ಕುಳಿತುಕೊಂಡೆ. ಅದರ ಮುಂದೆ ಸಿದ್ಧಪಡಿಸಲ್ಪಟ್ಟಿದ್ದ ಮೇಜಿತ್ತು. ಆ ಮೇಜಿನ ಮೇಲೆ ನನ್ನ ಧೂಪ ಮತ್ತು ಎಣ್ಣೆಯನ್ನು ಇಟ್ಟಿರುವೆ.


ಅರಸನಾದ ನೆಬೂಕದ್ನೆಚ್ಚರನು ಒಂದು ಬಂಗಾರದ ವಿಗ್ರಹವನ್ನು ಮಾಡಿಸಿದ್ದನು. ಆ ವಿಗ್ರಹವು ಅರವತ್ತು ಮೊಳ ಎತ್ತರವಾಗಿತ್ತು. ಆರು ಮೊಳ ಅಗಲವಾಗಿತ್ತು. ಆ ವಿಗ್ರಹವನ್ನು ಬಾಬಿಲೋನ್ ಪ್ರಾಂತ್ಯದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.


“ಎಫ್ರಾಯೀಮ್ ಇಸ್ರೇಲರೊಳಗೆ ತನ್ನನ್ನು ತಾನೇ ಮುಖ್ಯಸ್ಥನನ್ನಾಗಿ ಮಾಡಿಕೊಂಡನು. ಎಫ್ರಾಯೀಮನು ಮಾತನಾಡಿದಾಗ ಜನರು ಹೆದರಿ ನಡುಗಿದರು. ಆದರೆ ಅವನು ಪಾಪದಲ್ಲಿ ಬಿದ್ದನು. ಬಾಳನನ್ನು ಪೂಜಿಸಲು ಪ್ರಾರಂಭಿಸಿದನು.


ನಮ್ಮ ದೇವರಾದ ಯೆಹೋವನೇ, ನಿನ್ನ ಆಲಯವನ್ನು ಕಟ್ಟುವುದಕ್ಕಾಗಿ ನಾವು ಇವೆಲ್ಲವನ್ನೂ ಒಟ್ಟುಗೂಡಿಸಿದ್ದೇವೆ. ನಿನ್ನ ಪವಿತ್ರ ಹೆಸರನ್ನು ಪ್ರಸಿದ್ಧಿಪಡಿಸಲು ನಾವು ಆಲಯವನ್ನು ಕಟ್ಟುತ್ತೇವೆ. ಆದರೆ ಇವೆಲ್ಲಾ ನಿನ್ನಿಂದಲೇ ಬಂದವುಗಳು; ಇವೆಲ್ಲಾ ನಿನಗೇ ಸಂಬಂಧಪಟ್ಟವುಗಳು.


ದೇವರು ನನ್ನ ಮಾರ್ಗವನ್ನು ಮುಚ್ಚಿಬಿಟ್ಟಿದ್ದಾನೆ; ಆದ್ದರಿಂದ ನಾನು ಮುಂದೆ ಹೋಗಲಾರೆ. ಆತನು ನನ್ನ ಮಾರ್ಗವನ್ನು ಕತ್ತಲೆಯಲ್ಲಿ ಮರೆಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು