ಹೋಶೇಯ 4:13 - ಪರಿಶುದ್ದ ಬೈಬಲ್13 ಅವರು ಪರ್ವತ ಶಿಖರಗಳ ಮೇಲೆ ಯಜ್ಞಗಳನ್ನರ್ಪಿಸುತ್ತಾರೆ; ಬೆಟ್ಟಗಳ ಮೇಲೆಯೂ ಓಕ್, ಪಾಪಲಾರ್ ಮತ್ತು ಏಲ್ಮ್ ಮರಗಳಡಿಗಳಲ್ಲಿಯೂ ಧೂಪ ಹಾಕುತ್ತಾರೆ. ಆ ಮರಗಳ ನೆರಳು ದಟ್ಟವಾಗಿರುವದು. ಆದ್ದರಿಂದ ನಿಮ್ಮ ಹೆಣ್ಣುಮಕ್ಕಳು ವೇಶ್ಯೆಯರಂತೆ ಅದರಡಿಯಲ್ಲಿ ಮಲಗುವರು. ನಿಮ್ಮ ಸೊಸೆಯಂದಿರು ಲೈಂಗಿಕಪಾಪದಲ್ಲಿ ಮಗ್ನರಾಗಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಪರ್ವತಾಗ್ರಗಳಲ್ಲಿ ಯಜ್ಞ ಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪ ಹಾಕುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವುದರಿಂದ ಅವುಗಳ ಕೆಳಗೆ ಇವುಗಳನ್ನು ನಡೆಸುತ್ತಾರೆ. ಹೀಗಿರಲು ನನ್ನ ಜನರೇ, ನಿಮ್ಮ ಕುಮಾರಿಯರು ವ್ಯಭಿಚಾರಿಗಳಾಗಿ ನಡೆಯುವುದೂ, ನಿಮ್ಮ ವಧುಗಳು ವ್ಯಭಿಚಾರ ಮಾಡುವುದೂ ಏನಾಶ್ಚರ್ಯ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರು ಗಿರಿಶಿಖರಗಳ ಮೇಲೆ ಬಲಿಯನರ್ಪಿಸುತ್ತಾರೆ. ಬೆಟ್ಟಗುಡ್ಡಗಳ ಮೇಲೆ ಧೂಪಹಾಕುತ್ತಾರೆ. ದಟ್ಟ ನೆರಳಿನ ಅಲ್ಲೋನ್, ಲಿಬ್ನೆ, ಏಲಾ ವೃಕ್ಷಗಳ ಅಡಿಯಲ್ಲಿ ಇಂತಹುದನ್ನೆಲ್ಲ ಮಾಡುತ್ತಾರೆ. ಹೀಗಿರಲು ನಿಮ್ಮ ಪುತ್ರಿಯರು ಸೂಳೆಯರಾಗುವರು. ನಿಮ್ಮ ಸೊಸೆಗಳು ವ್ಯಭಿಚಾರಿಣಿಗಳಾಗುವರು. ಇದರಲ್ಲಿ ಆಶ್ಚರ್ಯವೇನಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಪರ್ವತಾಗ್ರಗಳಲ್ಲಿ ಯಜ್ಞಮಾಡುತ್ತಾರೆ, ಗುಡ್ಡಗಳ ಮೇಲೆ ಧೂಪಹಾಕುತ್ತಾರೆ; ಅಲ್ಲೋನ್, ಲಿಬ್ನೆ, ಏಲಾ ಮರಗಳ ನೆರಳು ದಟ್ಟವಾಗಿರುವದರಿಂದ ಅವುಗಳ ಕೆಳಗೆ ಇವುಗಳನ್ನು ನಡಿಸುತ್ತಾರೆ; ಹೀಗಿರಲು [ನನ್ನ ಜನರೇ,] ನಿಮ್ಮ ಕುಮಾರಿಯರು ಸೂಳೆಯರಾಗಿ ನಡೆಯುವದೂ, ನಿಮ್ಮ ವಧುಗಳು ವ್ಯಭಿಚಾರಮಾಡುವದೂ ಏನಾಶ್ಚರ್ಯ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸುತ್ತಾರೆ. ಗುಡ್ಡಗಳ ಮೇಲೆ ಏಲಾ, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ದಟ್ಟವಾಗಿರುವುದರಿಂದ ಧೂಪವನ್ನು ಸುಡುತ್ತಾರೆ. ಆದ್ದರಿಂದ ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವರು. ನಿಮ್ಮ ಸೊಸೆಯಂದಿರು ವ್ಯಭಿಚಾರಿಣಿಗಳಾಗುವರು. ಅಧ್ಯಾಯವನ್ನು ನೋಡಿ |
ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳಭರಿತವಾದ ಯಜ್ಞಗಳನ್ನು ಅರ್ಪಿಸಿದರು.
ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.