Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:3 - ಪರಿಶುದ್ದ ಬೈಬಲ್‌

3 ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಆದ್ದರಿಂದ ಅದರ ಜನರೆಲ್ಲಾ ಬಲಹೀನರಾಗತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ ಆಕಾಶದ ಪಕ್ಷಿಗಳೂ ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರಲು ದೇಶವು ನರಳುವದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಆಕಾಶಪಕ್ಷಿಗಳೂ ಬಳಲಿಹೋಗುವವು; ಸಮುದ್ರದ ಮೀನುಗಳು ಸಹ ನೀಗಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ದೇಶವು ದುಃಖಪಡುತ್ತಿದೆ. ಅದರಲ್ಲಿ ವಾಸಿಸುವ ಪ್ರತಿಯೊಬ್ಬನು ಕುಗ್ಗಿಹೋಗಿದ್ದಾನೆ. ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ, ಸಮುದ್ರ ಮೀನುಗಳು ನಶಿಸಿ ಹೋಗುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:3
17 ತಿಳಿವುಗಳ ಹೋಲಿಕೆ  

ಲೋಕದೊಳಗಿರುವ ಎಲ್ಲಾ ಮನುಷ್ಯರನ್ನೂ ಪ್ರಾಣಿಗಳನ್ನೂ ಆಕಾಶದಲ್ಲಿರುವ ಎಲ್ಲಾ ಪಕ್ಷಿಗಳನ್ನೂ ನೀರಿನಲ್ಲಿರುವ ಎಲ್ಲಾ ಮೀನುಗಳನ್ನೂ ನಾನು ನಾಶಮಾಡುವೆನು. ಎಲ್ಲಾ ದುಷ್ಟ ಜನರನ್ನೂ ಮತ್ತು ಅವರನ್ನು ಪಾಪಕ್ಕೆ ನಡಿಸುವ ಎಲ್ಲಾ ವಸ್ತುಗಳನ್ನೂ ನಾನು ನಾಶಮಾಡುವೆನು. ಭೂಮಿಯ ಮೇಲಿರುವ ಎಲ್ಲಾ ಜನರನ್ನು ನಿರ್ಮೂಲ ಮಾಡುವೆನು.” ಈ ವಿಷಯಗಳನ್ನು ಯೆಹೋವನು ತಿಳಿಸಿದನು.


ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳುಬೀಳುವವು. ಲೆಬನೋನಿನ ಪುಷ್ಪವು ಬಾಡಿಹೋಗುವದು.


ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಸಾರ್ವಜನಿಕ ಸ್ಥಳಗಳಲ್ಲಿ ಜನರು ಗೋಳಾಡುವರು. ರಸ್ತೆ ಬದಿಗಳಲ್ಲಿ ಜನರು ಗೋಳಾಡುವರು. ಪಟ್ಟಣದ ನಿವಾಸಿಗಳು ತಮ್ಮೊಂದಿಗೆ ಗೋಳಾಡಲು ರೈತರನ್ನು ಆಹ್ವಾನಿಸುವರು. ಅಳುವವರನ್ನು ಬಾಡಿಗೆಗೆ ಕರೆದುಕೊಂಡು ಬರುವರು.


ಆಗ ಜೀವವುಳ್ಳ ಸಮಸ್ತವೂ ಹೆದರಿಕೆಯಿಂದ ನಡುಗುವವು. ನೀರಿನಲ್ಲಿರುವ ಮೀನುಗಳು, ಆಕಾಶದ ಪಕ್ಷಿಗಳು, ಭೂಮಿಯ ಮೇಲಿರುವ ಪ್ರಾಣಿಗಳು, ನೆಲದ ಮೇಲೆ ಹರಿದಾಡುವವುಗಳೆಲ್ಲಾ ಭೀತಿಯಿಂದ ನಡುಗುವವು. ಪರ್ವತಗಳು ಬಿದ್ದುಹೋಗುವವು, ಪ್ರತಿಯೊಂದು ಗೋಡೆಯು ನೆಲಕ್ಕೆ ಬಿದ್ದು ಹೋಗುವದು.”


ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಬೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಬಹಳ ದಿವಸ ಬದುಕಿರಲಾರ” ಎಂದು ಹೇಳುತ್ತಿದ್ದಾರೆ.


ನಾನು ನೋಡಿದರೂ ಅಲ್ಲಿ ಜನರಿರಲಿಲ್ಲ. ಆಕಾಶದ ಎಲ್ಲಾ ಪಕ್ಷಿಗಳು ಹಾರಿಹೋಗಿದ್ದವು.


ಅದರ ಸಲುವಾಗಿ ಇಡೀ ದೇಶವು ಅಲುಗಾಡುವದು. ಸತ್ತವರಿಗಾಗಿ ದೇಶದ ಪ್ರತಿ ನಿವಾಸಿಯೂ ರೋಧಿಸುವನು. ಈಜಿಪ್ಟಿನ ನೈಲ್ ನದಿಯ ರೀತಿಯಲ್ಲಿ ದೇಶವು ತಿರುಗುಮುರುಗಾಗುವುದು.”


ಆಮೋಸನು ಹೇಳಿದ್ದೇನೆಂದರೆ, “ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲುಗಾವಲು ಕಂದುಬಣ್ಣವಾಗಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.”


ದೇಶವು ಅಸ್ವಸ್ಥತೆಯಿಂದ ಸಾಯುತ್ತಿದೆ. ಲೆಬನೋನ್ ನಾಚಿಗೊಂಡು ಒಣಗುತ್ತಿದೆ. ಶಾರೋನ್ ತಗ್ಗು ಒಣಗಿ ನಿರ್ಜನವಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಿಂದೆ ಬಹು ಅಂದವಾದ ಸಸಿಗಳನ್ನು ಬೆಳೆಯಿಸುತ್ತಿದ್ದವು. ಈಗ ಅವುಗಳು ಅಲ್ಲಿ ಬೆಳೆಯುವದಿಲ್ಲ.


ನಾನು ಪರ್ವತಗಳಿಗಾಗಿ ಗಟ್ಟಿಯಾಗಿ ಅಳುವೆನು; ಬರಿದಾದ ಹೊಲಗಳಿಗಾಗಿ ಶೋಕಗೀತೆಯನ್ನು ಹಾಡುವೆನು. ಏಕೆಂದರೆ ಅಲ್ಲಿ ಸಜೀವ ವಸ್ತುಗಳಿಲ್ಲ. ಯಾರೂ ಅಲ್ಲಿ ತಿರುಗಾಡುವದಿಲ್ಲ. ಆ ಸ್ಥಳಗಳಲ್ಲಿ ದನಗಳ ಸದ್ದು ಕೇಳಿಸುವದಿಲ್ಲ. ಪಕ್ಷಿಗಳು ಹಾರಿಹೋಗಿವೆ; ಪ್ರಾಣಿಗಳು ಓಡಿಹೋಗಿವೆ.


ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನ್ನು ಶಪಿಸಿದ್ದರಿಂದ ಅದು ಬರಡು ಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತುಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆ ಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನ್ನೂ ಶಕ್ತಿಯನ್ನೂ ತಪ್ಪಾಗಿ ಬಳಸಿಕೊಳ್ಳುತ್ತಿದ್ದಾರೆ.


ಪ್ರಾಣಿಗಳು ಹಸಿವಿನಿಂದ ನರಳಾಡುತ್ತಿವೆ. ಪ್ರಾಣಿಗಳ ಹಿಂಡು ಗಲಿಬಿಲಿಗೊಂಡು ಅಡ್ಡಾಡುತ್ತವೆ. ಅವುಗಳಿಗೆ ತಿನ್ನಲು ಹುಲ್ಲು ಇಲ್ಲ. ಕುರಿಗಳು ಸಾಯುತ್ತಿವೆ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.’”


ಹೀಗಿರಲು ನಾನು ಯೆಹೂದದ ಜನರನ್ನು ಶಿಕ್ಷಿಸಬಾರದೇ?” ಇದು ದೇವರಿಂದ ಬಂದ ಮಾತು. “ಅಂಥಾ ಜನರನ್ನು ನಾನು ಶಿಕ್ಷಿಸಬೇಕೆಂಬುದು ನಿನಗೆ ಗೊತ್ತು. ಅವರಿಗೆ ತಕ್ಕ ಶಿಕ್ಷೆಯನ್ನು ನಾನು ಕೊಡಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು