Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:5 - ಪರಿಶುದ್ದ ಬೈಬಲ್‌

5 ನೀವು (ಯಾಜಕರು) ಹಗಲಿನಲ್ಲಿ ಬಿದ್ದುಹೋಗುವಿರಿ. ರಾತ್ರಿ ಹೊತ್ತಿನಲ್ಲಿ ಪ್ರವಾದಿಗಳೂ ನಿಮ್ಮ ಜೊತೆಗೆ ಬೀಳುವರು ಮತ್ತು ನಾನು ನಿಮ್ಮ ತಾಯಿಯನ್ನು ಸಹ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಗಲಿನಲ್ಲೇ ನೀವು ಮುಗ್ಗರಿಸುತ್ತೀರಿ. ರಾತ್ರಿಯಲ್ಲಿ ಪ್ರವಾದಿಗಳು ಸಹ ನಿಮ್ಮೊಂದಿಗೆ ಮುಗ್ಗರಿಸುತ್ತಾರೆ. ನಿಮ್ಮ ವಂಶವೃಕ್ಷವನ್ನೇ ನಾನು ನಿರ್ಮೂಲಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 [ಆಹಾ, ಯಾಜಕರೇ,] ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀನು ಹಗಲಿನಲ್ಲಿಯೂ, ರಾತ್ರಿಯಲ್ಲಿಯೂ ಬೀಳುವೆ. ಪ್ರವಾದಿಗಳು ನಿನ್ನ ಸಂಗಡ ಮುಗ್ಗರಿಸಿಬೀಳುವರು. ಆದ್ದರಿಂದ ನಾನು ನಿನ್ನ ತಾಯಿಯನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:5
21 ತಿಳಿವುಗಳ ಹೋಲಿಕೆ  

“ನಿಮ್ಮ ತಾಯಿಯೊಂದಿಗೆ ವಾದಿಸಿರಿ. ಯಾಕೆಂದರೆ ಆಕೆ ನನ್ನ ಹೆಂಡತಿಯಲ್ಲ. ನಾನು ಆಕೆಯ ಗಂಡನಲ್ಲ. ವೇಶ್ಯೆಯ ಹಾಗೆ ಆಕೆ ವರ್ತಿಸುವದನ್ನು ನಿಲ್ಲಿಸು ಎಂದು ಹೇಳಿರಿ. ಆಕೆಯ ಸ್ತನಗಳ ಮಧ್ಯದಿಂದ ಆಕೆಯ ಪ್ರಿಯತಮರನ್ನು ತೆಗೆದುಹಾಕಲು ಹೇಳಿರಿ.


ಅನೇಕ ಹೆಂಗಸರು ತಮ್ಮ ಗಂಡಂದಿರನ್ನು ಕಳೆದುಕೊಳ್ಳುವರು. ಸಮುದ್ರದಡದಲ್ಲಿದ್ದ ಮರಳು ಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. ಮಧ್ಯಾಹ್ನದಲ್ಲಿಯೇ ನಾನು ಬಾತುಕನನ್ನು ತರುವೆನು. ಆ ಘಾತುಕನು ಯೆಹೂದದ ತಾಯಂದಿರ ಮೇಲೆರಗುವನು. ನಾನು ಯೆಹೂದದ ಜನರಿಗೆ ನೋವನ್ನು ಮತ್ತು ಭಯವನ್ನು ತರುವೆನು; ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು.


ಆದರೆ ಪರಲೋಕದಲ್ಲಿರುವ ಜೆರುಸಲೇಮ್ ಸ್ವತಂತ್ರಳಾದ ಸ್ತ್ರೀಯಂತಿದೆ. ಇದೇ ನಮ್ಮ ತಾಯಿ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು.


ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು.


ಈಗ ನಿನ್ನ ತಾಯಿಯು ಬಹಳ ನಾಚಿಕೆಪಡುವಳು. ನಿನಗೆ ಜನ್ಮಕೊಟ್ಟ ಆ ಸ್ತ್ರೀಯು ಅಪಮಾನ ಹೊಂದುವಳು. ಎಲ್ಲಾ ಜನಾಂಗಗಳಲ್ಲಿ ಬಾಬಿಲೋನ್ ಕನಿಷ್ಟವೆನಿಸುವುದು. ಅದು ಬರಿದಾದ ಮರುಭೂಮಿಯಂತಾಗುವುದು.


ಪ್ರವಾದಿಗಳಿಗೊಂದು ಸಂದೇಶ. ನಾನು ಬಹಳ ದುಃಖಿತನಾಗಿದ್ದೇನೆ. ನನ್ನ ಹೃದಯ ಒಡೆದುಹೋಗಿದೆ. ನನ್ನ ಎಲುಬುಗಳೆಲ್ಲಾ ನಡುಗುತ್ತಿವೆ. ನಾನು ಅಮಲೇರಿದವನಂತಿದ್ದೇನೆ. ಯೆಹೋವನೂ ಆತನ ಪರಿಶುದ್ಧ ನುಡಿಗಳೂ ಇದಕ್ಕೆ ಕಾರಣ.


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


“ನರಪುತ್ರನೇ, ಈ ಜನರು ತಮ್ಮ ವಿಗ್ರಹಗಳಿಗೆ ಪ್ರತಿಷ್ಠಿತರಾಗಿದ್ದಾರೆ ಮತ್ತು ಪಾಪಕ್ಕೆ ಬೀಳಲು ತಮಗೆ ತಾವೇ ಅವಕಾಶಮಾಡಿಕೊಡುತ್ತಾರೆ. ಸಹಾಯಕ್ಕಾಗಿ ನನ್ನನ್ನು ಕೇಳಿಕೊಳ್ಳಲು ಅವರಿಗೆ ಅವಕಾಶ ಕೊಡಬೇಕೇ? ಇಲ್ಲ.


ಅವರ ತಾಯಿಯು ವೇಶ್ಯೆಯಂತೆ ವರ್ತಿಸಿದಳು. ತಾನು ನಡಿಸಿದ ಕೃತ್ಯಗಳಿಗಾಗಿ ಆಕೆ ನಾಚಿಕೆಪಡಬೇಕು. ಆಕೆಯು ಹೀಗೆಂದುಕೊಳ್ಳುತ್ತಿದ್ದಾಳೆ, ‘ನಾನು ನನ್ನ ಪ್ರಿಯತಮರ ಬಳಿಗೆ ಹೋಗುವೆನು. ಅವರು ನನಗೆ ಅನ್ನ ನೀರನ್ನು ಕೊಡುವರು. ನನಗೆ ಉಣ್ಣೆಯನ್ನೂ, ನಾರುಮಡಿಯನ್ನೂ ಕೊಡುವರು. ದ್ರಾಕ್ಷಾರಸ ಮತ್ತು ಆಲೀವ್ ಎಣ್ಣೆಯನ್ನೂ ಕೊಡುವರು.’


ಇಸ್ರೇಲಿನ ಹೆಮ್ಮೆಯು ಅವರಿಗೆ ವಿರುದ್ಧವಾಗಿ ಸಾಕ್ಷಿನೀಡುತ್ತದೆ. ಇಸ್ರೇಲ್ ಮತ್ತು ಎಫ್ರಾಯೀಮ್ ತಮ್ಮ ಪಾಪಗಳಿಂದಲೇ ಮುಗ್ಗರಿಸುವರು. ಯೆಹೂದವೂ ಅವರೊಂದಿಗೆಯೇ ಮುಗ್ಗರಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು