ಹೋಶೇಯ 4:8 - ಪರಿಶುದ್ದ ಬೈಬಲ್8 “ಜನರ ಪಾಪದೊಂದಿಗೆ ಯಾಜಕರೂ ಒಂದಾದರು, ಅವರು ಹೆಚ್ಚುಹೆಚ್ಚು ಪಾಪಗಳನ್ನು ಮಾಡಲು ಆಶಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನ್ನ ಜನರ ಪಾಪವೇ ಅವರಿಗೆ ಜೀವನಾಧಾರ. ಎಂತಲೇ ಅವರು ಪಾಪಕೃತ್ಯಗಳನ್ನೇ ಅಧಿಕವಾಗಿ ಬಯಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ. ಅವರು ದುಷ್ಟತನದ ಮೇಲೆ ಅವರ ಮನಸ್ಸನ್ನು ಇಡುತ್ತಾರೆ. ಅಧ್ಯಾಯವನ್ನು ನೋಡಿ |
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ಯೆಹೋವನಾದ ನಾನೇ ಸ್ವತಃ ಪ್ರತಿಯೊಬ್ಬನಿಗೂ ಉತ್ತರಿಸುವೆನು ಅಂದರೆ ಅವನು ತನ್ನನ್ನು ಪಾಪಕ್ಕೆ ಬೀಳಿಸುವ ವಿಗ್ರಹಗಳನ್ನು ಹೊಂದಿದ್ದರೂ ಆ ವಿಗ್ರಹಗಳನ್ನು ಪೂಜಿಸುತ್ತಿದ್ದರೂ ಮತ್ತು ನನ್ನಿಂದ ತನ್ನನ್ನು ಬೇರ್ಪಡಿಸಿಕೊಳ್ಳುತ್ತಿದ್ದರೂ ನನ್ನ ಉಪದೇಶಕ್ಕಾಗಿ ನನ್ನ ಬಳಿಗೆ ಬಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಬ ಉತ್ತರ ಕೊಡುವೆನು.