ಹೋಶೇಯ 5:1 - ಪರಿಶುದ್ದ ಬೈಬಲ್1 “ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ವಿುಚ್ಪದಲ್ಲಿ ಉರುಲಾಗಿಯೂ ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಯಾಜಕರೇ, ಇದನ್ನು ನೀವು ಕೇಳಿರಿ; ಇಸ್ರಾಯೇಲಿನ ಮನೆತನದವರೇ ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದ ಕಾರಣ ನಿಮಗೆ ವಿರುದ್ಧವಾಗಿ ಈ ನ್ಯಾಯತೀರ್ಪು ಬಂದಿದೆ. ಅಧ್ಯಾಯವನ್ನು ನೋಡಿ |
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.
ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.