ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”
“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.