ಹೋಶೇಯ 5:13 - ಪರಿಶುದ್ದ ಬೈಬಲ್13 ಎಫ್ರಾಯೀಮು ತನ್ನ ವ್ಯಾಧಿಯನ್ನು ನೋಡಿದನು. ಯೆಹೂದವು ತನ್ನ ಗಾಯಗಳನ್ನು ನೋಡಿದನು. ಆಮೇಲೆ ಸಹಾಯಕ್ಕಾಗಿ ಅಶ್ಶೂರ್ಯರ ಬಳಿಗೆ ಹೋದರು. ಆ ಮಹಾ ಅರಸನ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಆದರೆ ಆ ಅರಸನು ನಿಮ್ಮನ್ನು ಗುಣಮಾಡನು. ನಿಮ್ಮ ಗಾಯಗಳನ್ನು ಗುಣಮಾಡಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಎಫ್ರಾಯೀಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ, ಎಫ್ರಾಯೀಮ್ ಅಸ್ಸೀರಿಯಕ್ಕೆ ತಿರುಗಿ, ಸಹಾಯಕ್ಕಾಗಿ ಮಹಾ ಅರಸನ ಬಳಿಗೆ ಕಳುಹಿಸಿತು. ಆದರೆ ನಿಮ್ಮನ್ನು ಗುಣಪಡಿಸಲು ಅವನು ಶಕ್ತನಲ್ಲ. ನಿಮ್ಮ ಗಾಯವನ್ನು ಗುಣಪಡಿಸಲಾರನು. ಅಧ್ಯಾಯವನ್ನು ನೋಡಿ |
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.