Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:15 - ಪರಿಶುದ್ದ ಬೈಬಲ್‌

15 ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:15
51 ತಿಳಿವುಗಳ ಹೋಲಿಕೆ  

ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.


ಅವರಲ್ಲಿ ಕೆಲವರನ್ನು ದೇವರು ಕೊಂದಾಗಲೆಲ್ಲಾ, ಉಳಿದವರು ಆತನ ಕಡೆಗೆ ತಿರುಗಿಕೊಂಡು ಓಡಿ ಬರುತ್ತಿದ್ದರು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


‘ನೀವು ನಿಮ್ಮ ಪಾಪವನ್ನು ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಬೇರೆ ರಾಷ್ಟ್ರದವರ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ನನ್ನ ಆಜ್ಞೆಯನ್ನು ಪರಿಪಾಲಿಸಲಿಲ್ಲ’” ಇದು ಯೆಹೋವನ ನುಡಿಯಾಗಿತ್ತು.


ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ನೀವು ಮಾಡಿದ ದುಷ್ಟತನವನ್ನು ನೀವು ಜ್ಞಾಪಿಸಿಕೊಳ್ಳುವಿರಿ. ಅವುಗಳು ಒಳ್ಳೆಯದಲ್ಲ ಎಂಬುದನ್ನು ಅರಿತುಕೊಳ್ಳುವಿರಿ. ಆಗ ನೀವು ಮಾಡಿದ ಪಾಪಕೃತ್ಯಗಳಿಗಾಗಿ ನಿಮ್ಮನ್ನೆ ನೀವು ಅಸಹ್ಯಪಟ್ಟುಕೊಳ್ಳುವಿರಿ.”


ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.


ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ. ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ. ಹೊಸ ದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ. ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು.


ಯೆಹೋವನು ತನ್ನ ಸ್ಥಳದಿಂದ ಹೊರಟು ಬರುವುದನ್ನು ನೋಡಿರಿ. ಆತನು ಲೋಕದ ಬೆಟ್ಟಗಳ ಮೇಲೆ ನಡೆಯಲು ಬರುತ್ತಿದ್ದಾನೆ.


“ಜನರ ನಾಯಕರು ಯೆಹೋವನನ್ನು ಹುಡುಕಾಡುವರು. ಅವರು ತಮ್ಮ ಕುರಿದನಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವರು. ಆದರೆ ಅವರು ಯೆಹೋವನನ್ನು ಕಂಡುಕೊಳ್ಳುವದಿಲ್ಲ. ಯಾಕೆಂದರೆ ಆತನು ಅವರನ್ನು ಬಿಟ್ಟುಹೋಗಿರುತ್ತಾನೆ.


ನಿಮ್ಮನ್ನು ನಿಮ್ಮ ದುಷ್ಟತ್ವದಿಂದ ಹೊಲಸು ಮಾಡಿಕೊಂಡದ್ದನ್ನು ಅಲ್ಲಿ ಜ್ಞಾಪಕಮಾಡಿಕೊಳ್ಳುವಿರಿ. ಆಗ ನೀವು ನಾಚಿಕೆಪಡುವಿರಿ.


ಯೆಹೋವನ ಮಹಿಮೆಯು ಆಕಾಶಕ್ಕೆ ಎತ್ತಲ್ಪಟ್ಟು ಜೆರುಸಲೇಮಿಗೆ ಪೂರ್ವದಲ್ಲಿರುವ ಬೆಟ್ಟದ ಮೇಲೆ ನಿಂತಿತು.


ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಬಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನ್ನು ತುಂಬಿಕೊಂಡಿತು.


ಆಗ ದೇವರು ನನಗೆ, “ನರಪುತ್ರನೇ, ನನ್ನನ್ನು ನನ್ನ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕೃತ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಕೃತ್ಯಗಳನ್ನು ನೀನು ನೋಡುವೆ” ಎಂದು ಹೇಳಿದನು.


ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.


“ಇದು ನನ್ನ ಶಾಶ್ವತ ನಿವಾಸಸ್ಥಾನ. ನಾನು ಇಲ್ಲೇ ಆಸನಾರೂಢನಾಗಿರುವೆನು. ಇದೇ ನನಗೆ ಇಷ್ಟವಾದ ಸ್ಥಳ.


ಯೆಹೋವನೇ, ತಾವು ನಿಜವಾಗಿಯೂ ಬಲಹೀನರೆಂಬುದನ್ನು ಅವರು ಕಲಿತುಕೊಳ್ಳುವಂತೆ ಮಾಡು; ಆಗ ಅವರು ನಿನ್ನ ಹೆಸರನ್ನು ಆರಾಧಿಸಬೇಕೆನ್ನುವರು.


ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ!


ನನ್ನ ಹೆಸರಿನಿಂದ ಕರೆಯಲ್ಪಡುವ ನನ್ನ ಜನರು ದೀನತೆಯಿಂದ ಪ್ರಾರ್ಥಿಸಿ, ತಮ್ಮ ಪಾಪಗಳನ್ನು ಬಿಟ್ಟು ನನ್ನ ಕಡೆಗೆ ತಿರುಗಿದರೆ ನಾನು ಪರಲೋಕದಿಂದ ಅವರನ್ನು ಆಲೈಸಿ, ಅವರ ಪಾಪಗಳನ್ನು ಮನ್ನಿಸಿ ಅವರ ದೇಶವನ್ನು ಗುಣಪಡಿಸುವೆನು.


ನನ್ನನ್ನು ಪ್ರೀತಿಸುವವರನ್ನು ನಾನೂ ಪ್ರೀತಿಸುವೆನು; ಬಹಳವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಸೀಸೆರನ ಹತ್ತಿರ ಒಂಭೈನೂರು ಕಬ್ಬಿಣದ ರಥಗಳಿದ್ದವು. ಅವನು ಇಪ್ಪತ್ತು ವರ್ಷಗಳ ಕಾಲ ಇಸ್ರೇಲರನ್ನು ತುಂಬ ಬಾಧಿಸಿದನು. ಆದ್ದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಲ್ಲಿ ಮೊರೆಯಿಟ್ಟರು.


ಅವರು ಒಬ್ಬರಿಗೊಬ್ಬರು, “ನಾವು ನಮ್ಮ ತಮ್ಮನಾದ ಯೋಸೇಫನಿಗೆ ಮಾಡಿದ ಕೆಟ್ಟಕಾರ್ಯಕ್ಕಾಗಿ ಈ ಶಿಕ್ಷೆಯನ್ನು ಅನುಭವಿಸುತ್ತಿದ್ದೇವೆ. ಪ್ರಾಣಸಂಕಟದಲ್ಲಿದ್ದ ಅವನು ತನ್ನನ್ನು ಕಾಪಾಡುವಂತೆ ನಮ್ಮನ್ನು ಬೇಡಿಕೊಂಡರೂ ನಾವು ಅವನ ಮೊರೆಯನ್ನು ತಿರಸ್ಕರಿಸಿದೆವು. ಆದ್ದರಿಂದ ಈಗ ಪ್ರಾಣಸಂಕಟಕ್ಕೀಡಾಗಿದ್ದೇವೆ” ಎಂದು ಮಾತಾಡಿಕೊಂಡರು.


ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ಪಾಪ ಮಾಡಿದ್ದೇವೆ. ಈ ಸರ್ಪಗಳನ್ನು ನಮ್ಮಿಂದ ತೊಲಗಿ ಹೋಗುವಂತೆ ಪ್ರಾರ್ಥನೆ ಮಾಡು” ಎಂದು ಬೇಡಿಕೊಂಡರು. ಮೋಶೆ ಜನರಿಗೋಸ್ಕರ ಪ್ರಾರ್ಥಿಸಿದನು.


ಯೆಹೋವನು ಹೀಗೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು.


“ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು.


ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಎಲ್ಲಾ ಆಪತ್ತುಗಳಿಂದ ರಕ್ಷಿಸಿದನು.


ಅವರು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.


ಅವರು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.


ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.


ನಾವು ಏನು ಮಾಡಿದ್ದೇವೆ ಎಂಬುದನ್ನು ಪರಿಶೀಲಿಸಿ ನೋಡೋಣ. ಬಳಿಕ ಯೆಹೋವನಿಗೆ ಅಭಿಮುಖರಾಗೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು