Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:4 - ಪರಿಶುದ್ದ ಬೈಬಲ್‌

4 ಇಸ್ರೇಲಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆ ದುಷ್ಕೃತ್ಯಗಳು ಅವರನ್ನು ತಮ್ಮ ದೇವರ ಬಳಿಗೆ ಹಿಂತಿರುಗಿ ಬಾರದಂತೆ ಮಾಡುತ್ತಿವೆ. ಅವರು ಯಾವಾಗಲೂ ಇತರ ದೇವರುಗಳ ಹಿಂದೆ ಹೇಗೆ ಹೋಗೋಣ ಎಂದು ಮಾರ್ಗವನ್ನು ಹುಡುಕುತ್ತಿದ್ದಾರೆ. ಅವರಿಗೆ ಯೆಹೋವನ ಪರಿಚಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಅವರನ್ನು ಬಿಡುವುದಿಲ್ಲ; ವ್ಯಭಿಚಾರದ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ತಿಳಿದುಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ತಮ್ಮ ದೇವರ ಬಳಿಗೆ ಹಿಂದಿರುಗದಂತೆ ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರ ಅವರಲ್ಲಿ ನೆಲೆಗೊಂಡಿದೆ. ಅವರು ಸರ್ವೇಶ್ವರನನ್ನು ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಬಿಡವು; ವ್ಯಭಿಚಾರ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ಅರಿಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳದಂತೆ, ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರದ ಆತ್ಮವು ಅವರ ಹೃದಯದಲ್ಲಿದೆ. ಅವರು ಯೆಹೋವ ದೇವರನ್ನು ಸ್ವೀಕರಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:4
22 ತಿಳಿವುಗಳ ಹೋಲಿಕೆ  

ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ.


ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು.


ಆದರೆ ನೀವು ಆತನನ್ನು ನಿಜವಾಗಿಯೂ ತಿಳಿದಿಲ್ಲ. ನಾನು ಆತನನ್ನು ಬಲ್ಲೆನು. ನಾನು ಆತನನ್ನು ತಿಳಿದಿಲ್ಲವೆಂದು ಹೇಳಿದರೆ ನಿಮ್ಮಂತೆ ನಾನು ಸಹ ಸುಳ್ಳುಗಾರನಾಗುತ್ತೇನೆ. ನಾನು ಆತನನ್ನು ಬಲ್ಲೆನು. ನಾನು ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.


“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.


ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.


ಬಾಬಿಲೋನಿನ ನೀರಿನ ಮೇಲೆ ಒಂದು ಖಡ್ಗ ಬೀಳಲಿ. ಆ ನೀರು ಬತ್ತಿಹೋಗುವದು. ಬಾಬಿಲೋನ್ ದೇಶದಲ್ಲಿ ಅನೇಕಾನೇಕ ವಿಗ್ರಹಗಳಿವೆ. ಬಾಬಿಲೋನಿನ ಜನರು ಮೂರ್ಖರೆಂಬುದನ್ನು ಆ ವಿಗ್ರಹಗಳು ತೋರಿಸುತ್ತವೆ. ಆ ಜನರಿಗೆ ದುರ್ಗತಿ ಬರುತ್ತದೆ.


ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.


ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.


ಒಂದು ದುಷ್ಕೃತ್ಯ ಮತ್ತೊಂದು ದುಷ್ಕೃತ್ಯವನ್ನು ಹಿಂಬಾಲಿಸಿ ಬಂದಿತು. ಒಂದು ಸುಳ್ಳು ಇನ್ನೊಂದು ಸುಳ್ಳನ್ನು ಹಿಂಬಾಲಿಸಿತು. ಜನರು ನನ್ನನ್ನು ಅರಿತುಕೊಳ್ಳಲಿಲ್ಲ.” ಯೆಹೋವನು ಆ ಮಾತುಗಳನ್ನು ಹೇಳಿದನು.


ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.


ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ.


ಏಲಿಯ ಮಕ್ಕಳು ದುಷ್ಟರಾಗಿದ್ದರು. ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


“ನಿಮ್ಮ ಹೆಣ್ಣುಮಕ್ಕಳು ಸೂಳೆತನ ಮಾಡುವದಕ್ಕಾಗಲಿ ನಿಮ್ಮ ಸೊಸೆಯರು ಲೈಂಗಿಕಪಾಪ ಮಾಡುವದಕ್ಕಾಗಲಿ ನಾನು ಅವರನ್ನು ದೂರುವದಿಲ್ಲ. ಗಂಡಸರು ವೇಶ್ಯೆಯರೊಂದಿಗೆ ಮಲಗುವರು. ಅವರು ಮಂದಿರದ ವೇಶ್ಯೆಯರೊಂದಿಗೆ ಯಜ್ಞವನ್ನರ್ಪಿಸುವರು. ಹೀಗೆ ಆ ಬುದ್ಧಿಯಿಲ್ಲದ ಜನರು ತಮ್ಮನ್ನು ತಾವೇ ನಾಶಮಾಡಿಕೊಳ್ಳುತ್ತಾರೆ.


ಹೀಗೆ ಎಫ್ರಾಯೀಮ್ ತಿಳಿವಳಿಕೆ ಇಲ್ಲದ ಮೂರ್ಖ ಪಾರಿವಾಳದಂತಾಗಿದೆ. ಜನರು ಸಹಾಯಕ್ಕಾಗಿ ಈಜಿಪ್ಟನ್ನು ಕರೆದರು, ಅಶ್ಶೂರ್ಯದ ಕಡೆಗೆ ಓಡಿದರು.


ಅವನಿಗಾಗುವ ಶಿಕ್ಷೆಯು ಒಬ್ಬ ಸ್ತ್ರೀಯ ಪ್ರಸವವೇದನೆಯಂತಿರುವದು. ಅವನು ಜಾಣನಾದ ಮಗನಾಗಿರುವದಿಲ್ಲ; ಹುಟ್ಟುವ ಸಮಯ ಬಂದರೂ ಅವನು ಜೀವಿಸುವದಿಲ್ಲ.


“ಲೈಂಗಿಕಪಾಪ, ಗಡುಸಾದ ಮದ್ಯ ಮತ್ತು ಹೊಸ ದ್ರಾಕ್ಷಾರಸ ಇವುಗಳಿಂದ ವಿಚಾರಪ್ರಜ್ಞೆಯನ್ನು ಕಳೆದುಕೊಳ್ಳುವರು.


“ಎಫ್ರಾಯೀಮ್ ಹೆಚ್ಚೆಚ್ಚಾಗಿ ಯಜ್ಞವೇದಿಕೆಗಳನ್ನು ಕಟ್ಟಿಸಿದನು. ಅದು ಪಾಪವಾಗಿತ್ತು. ಆ ವೇದಿಕೆಗಳ ಮೇಲೆಯೇ ಅವರು ಪಾಪಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು