Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:6 - ಪರಿಶುದ್ದ ಬೈಬಲ್‌

6 “ಜನರ ನಾಯಕರು ಯೆಹೋವನನ್ನು ಹುಡುಕಾಡುವರು. ಅವರು ತಮ್ಮ ಕುರಿದನಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವರು. ಆದರೆ ಅವರು ಯೆಹೋವನನ್ನು ಕಂಡುಕೊಳ್ಳುವದಿಲ್ಲ. ಯಾಕೆಂದರೆ ಆತನು ಅವರನ್ನು ಬಿಟ್ಟುಹೋಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವು ತಮ್ಮ ದನ ಮತ್ತು ಕುರಿಗಳ ಸಂಗಡ ಯೆಹೋವನಿಗೆ ಶರಣುಹೊಗಲು ಹೊರಡುವವು; ಆತನು ಸಿಕ್ಕುವುದಿಲ್ಲ, ಅವುಗಳಿಂದ ಮರೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ತಮ್ಮ ದನಕುರಿಗಳೊಂದಿಗೆ ಸರ್ವೇಶ್ವರಸ್ವಾಮಿಯನ್ನು ಅರಸಿಹೋದರೂ, ಅವರನ್ನು ಕಾಣರು. ಸರ್ವೇಶ್ವರ ಅವರಿಂದ ಮರೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವು ತಮ್ಮ ದನಕುರಿಗಳ ಸಂಗಡ ಯೆಹೋವನನ್ನು ಶರಣುಹೊಗಲು ಹೊರಡುವವು; ಆತನು ಸಿಕ್ಕನು, ಅವುಗಳ ಕಡೆಯಿಂದ ಮರೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಯೆಹೋವ ದೇವರನ್ನು ಹುಡುಕುವುದಕ್ಕೆ ತಮ್ಮ ದನಕುರಿಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡಿದ್ದರಿಂದ, ಅವರು ಆತನನ್ನು ಕಾಣುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:6
23 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಹುಡುಕುವಿರಿ, ಆದರೆ ನೀವು ನನ್ನನ್ನು ಕಂಡುಕೊಳ್ಳುವುದಿಲ್ಲ ಮತ್ತು ನಾನಿರುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.


“ಇವೆಲ್ಲಾ ನಿಮಗೆ ಸಂಭವಿಸುವಾಗ ನೀವು ಸಹಾಯಕ್ಕಾಗಿ ನನ್ನನ್ನು ಕೇಳುವಿರಿ; ಆದರೆ ನಾನು ನಿಮಗೆ ಸಹಾಯ ಮಾಡುವುದಿಲ್ಲ. ನೀವು ನನಗಾಗಿ ಹುಡುಕುವಿರಿ. ಆದರೆ ನಾನು ನಿಮಗೆ ಸಿಕ್ಕುವುದಿಲ್ಲ.


ಆಗ ದೇವರು ನನಗೆ, “ನರಪುತ್ರನೇ, ನನ್ನನ್ನು ನನ್ನ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕೃತ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಕೃತ್ಯಗಳನ್ನು ನೀನು ನೋಡುವೆ” ಎಂದು ಹೇಳಿದನು.


ನೀನು ನಿನಗೆ ಮೋಡಗಳನ್ನು ಹೊದಿಸಿಕೊಂಡು ನಮ್ಮ ಯಾವ ಪ್ರಾರ್ಥನೆಯೂ ನಿನ್ನ ಬಳಿಗೆ ಬಾರದಂತೆ ಮಾಡಿದೆ.


ಕೆಲವರು ಹೇಳುವ ಸುಳ್ಳುಗಳನ್ನು ನಂಬಬೇಡಿರಿ. ಅವರು “ಇದು ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ” ಎಂದು ಹೇಳುತ್ತಾರೆ.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ಯೇಸು ಆಗಾಗ್ಗೆ ನಿರ್ಜನ ಸ್ಥಳಗಳಿಗೆ ಹೋಗಿ ಪ್ರಾರ್ಥನೆ ಮಾಡುತ್ತಿದ್ದನು.


ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನ್ನು ಕೇಳುವದಿಲ್ಲ.


ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.


ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ ನನ್ನ ಪ್ರಿಯನು ಹೊರಟುಹೋಗಿದ್ದನು! ಅವನು ಇಲ್ಲದಿರುವುದನ್ನು ಕಂಡು ನನ್ನ ಹೃದಯವು ಕುಸಿದುಹೋಯಿತು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ.


ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.


ಮೋಶೆಯು, “ಯೌವನಸ್ಥರು, ಮುದುಕರು, ಎಲ್ಲರೂ ಹೋಗುತ್ತೇವೆ. ನಮ್ಮ ಗಂಡು ಹೆಣ್ಣುಮಕ್ಕಳನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಯಾಕೆಂದರೆ ಇದು ಯೆಹೋವನ ಜಾತ್ರೆ” ಎಂದು ಉತ್ತರಕೊಟ್ಟನು.


ನೀವು ಯೆಹೋವನಿಗೆ ಪ್ರಾರ್ಥಿಸಬಹುದು. ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ. ನಿಮ್ಮ ಕೆಟ್ಟ ಪಾಪಗಳ ನಿಮಿತ್ತ ತನ್ನ ಮುಖವನ್ನು ಮರೆಮಾಡಿಕೊಳ್ಳುತ್ತಾನೆ.”


ಅವರಿಗೆ ನಾನು ನನ್ನ ರೌದ್ರವನ್ನು ತೋರಿಸುವೆನು. ಅವರಿಗೆ ನಾನು ಕರುಣೆಯನ್ನು ಎಂದಿಗೂ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದೂ ಇಲ್ಲ. ಅವರು ನನ್ನನ್ನು ಕೂಗುವರು, ಆದರೆ ನಾನು ಅವರಿಗೆ ಕಿವಿಗೊಡುವುದಿಲ್ಲ.”


“ಯೆರೆಮೀಯನೇ, ಈ ಯೆಹೂದದ ಜನರಿಗಾಗಿ ಬೇಡಿಕೊಳ್ಳಬೇಡ. ಅವರಿಗಾಗಿ ಮೊರೆಯಿಡಬೇಡ. ಅವರಿಗಾಗಿ ಪ್ರಾರ್ಥನೆ ಮಾಡಿದರೂ ನಾನು ಕೇಳುವದಿಲ್ಲ. ಆ ಜನರು ತೊಂದರೆಯನ್ನು ಅನುಭವಿಸುವರು. ಆಗ ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಕೇಳುವದಿಲ್ಲ.


ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.


“ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.


ಮೃತ್ಯುಸಮುದ್ರದಿಂದ ಮೆಡಿಟರೇನಿಯನ್ ಸಮುದ್ರದ ತನಕ, ಉತ್ತರದಿಂದ ಪೂರ್ವದಿಕ್ಕಿನ ತನಕ ಜನರು ಯೆಹೋವನ ಸಂದೇಶಕ್ಕಾಗಿ ಹಾತೊರೆಯುತ್ತಾ ಅಲೆದಾಡುವರು. ಆದರೆ ಅವರು ಕಂಡುಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು