ಹೋಶೇಯ 6:2 - ಪರಿಶುದ್ದ ಬೈಬಲ್2 ಎರಡು ದಿವಸಗಳ ತರುವಾಯ ನಮ್ಮನ್ನು ತಿರುಗಿ ಜೀವಂತ ಮಾಡುವನು. ಮೂರನೇ ದಿವಸದಲ್ಲಿ ನಮ್ಮನ್ನು ಎಬ್ಬಿಸುವನು. ಆಗ ನಾವು ಆತನ ಸಮೀಪದಲ್ಲಿ ವಾಸಿಸಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು. ಅಧ್ಯಾಯವನ್ನು ನೋಡಿ |
ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”