ಹೋಶೇಯ 6:3 - ಪರಿಶುದ್ದ ಬೈಬಲ್3 ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನನ್ನು ತಿಳಿದುಕೊಳ್ಳೋಣ, ಹುಡುಕಿ ಹುಡುಕಿ ತಿಳಿದುಕೊಳ್ಳೋಣ; ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ ಭೂವಿುಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು [ಅಂದುಕೊಂಡು ನನ್ನನ್ನು ಮರೆಹೊಗುವರು]. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು. ಅಧ್ಯಾಯವನ್ನು ನೋಡಿ |
ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.