Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 6:6 - ಪರಿಶುದ್ದ ಬೈಬಲ್‌

6 ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನಬಲಿ ದಾನವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ. ದಹನಬಲಿಗಳಿಗಿಂತ ದೇವರ ಅಂಗೀಕಾರವನ್ನೇ ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 6:6
24 ತಿಳಿವುಗಳ ಹೋಲಿಕೆ  

ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.


‘ಪಶುಯಜ್ಞಗಳು ನನಗೆ ಬೇಡ, ಕರುಣೆಯೇ ನನಗೆ ಬೇಕು’ ಎಂದು ಪವಿತ್ರಗ್ರಂಥವು ಹೇಳುತ್ತದೆ. ಅದರ ಅರ್ಥವನ್ನು ನೀವು ನಿಜವಾಗಿಯೂ ಅರಿತಿಲ್ಲ. ನೀವು ಅದರ ಅರ್ಥವನ್ನು ತಿಳಿದುಕೊಂಡರೆ ತಪ್ಪನ್ನೇನೂ ಮಾಡದ ಇವರಿಗೆ ತಪ್ಪಿತಸ್ಥರೆಂದು ತೀರ್ಪು ಮಾಡುವುದಿಲ್ಲ.


ಸರಿಯಾದ ಮತ್ತು ನ್ಯಾಯವಾದ ಕಾರ್ಯಗಳನ್ನು ಮಾಡು. ಯೆಹೋವನು ಅವುಗಳನ್ನು ಯಜ್ಞಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.


ಆದಕ್ಕೆ ಸಮುವೇಲನು, “ಯೆಹೋವನಿಗೆ ಯಾವುದು ಹೆಚ್ಚು ಮೆಚ್ಚಿಗೆಯಾಗಿದೆ? ಸರ್ವಾಂಗಹೋಮಗಳೇ? ಯಜ್ಞಗಳೇ? ಇಲ್ಲವೆ ಯೆಹೋವನ ಆಜ್ಞೆಗಳಿಗೆ ವಿಧೇಯರಾಗುವುದೇ? ದೇವರಿಗೆ ಯಜ್ಞವನ್ನು ಸಮರ್ಪಿಸುವುದಕ್ಕಿಂತ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದೇ ಉತ್ತಮ. ಟಗರುಗಳ ಕೊಬ್ಬನ್ನು ಅರ್ಪಿಸುವುದಕ್ಕಿಂತ ಆತನ ಮಾತುಗಳನ್ನು ಆಲಿಸುವುದು ಉತ್ತಮ.


“ನಿಮ್ಮ ಆರಾಧನಾ ದಿವಸಗಳನ್ನು ನಾನು ದ್ವೇಷಿಸುತ್ತೇನೆ. ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ನಿಮ್ಮ ಧಾರ್ಮಿಕ ಕೂಟಗಳಲ್ಲಿ ನಾನು ಸಂತೋಷಿಸುವದಿಲ್ಲ.


ಯೆಹೋವನು ಹೇಳುವುದೇನೆಂದರೆ, “ಈ ಯಜ್ಞಗಳನ್ನೆಲ್ಲ ನೀವು ನನಗೆ ಕೊಡುತ್ತಲೇ ಇರುವುದೇಕೆ? ನಿಮ್ಮ ಆಡುಗಳ ಯಜ್ಞಗಳೂ, ಹೋರಿಗಳ, ಕುರಿಗಳ, ಆಡುಗಳ ಕೊಬ್ಬೂ ನನಗೆ ಬೇಕಿಲ್ಲ. ಅವುಗಳ ರಕ್ತಕ್ಕೆ ನಾನು ಪ್ರಸನ್ನನಾಗುವುದಿಲ್ಲ.


ದೇವರನ್ನು ಆರಾಧಿಸಲು ಹೋಗುವಾಗ ಎಚ್ಚರಿಕೆಯಿಂದಿರಿ. ಮೂಢರಂತೆ ಯಜ್ಞಗಳನ್ನು ಅರ್ಪಿಸುವುದಕ್ಕಿಂತ ದೇವರಿಗೆ ಕಿವಿಗೊಡುವುದೇ ಉತ್ತಮ. ಮೂಢರು ದುಷ್ಕೃತ್ಯಗಳನ್ನು ಮಾಡುತ್ತಲೇ ಇರುವರು; ಆದರೆ ಅವರಿಗೆ ಅದು ಗೊತ್ತೇ ಇಲ್ಲ.


ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು. ಯೆಹೋಯಾಕೀಮನೇ, ‘ದೇವರನ್ನು ಅರಿತುಕೊಳ್ಳುವುದು ಎಂದರೇನು?’ ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು, ನನ್ನನ್ನು ಅರಿತುಕೊಳ್ಳಲು ಬೇಕಾದದ್ದು ಅದೇ. ಇದು ಯೆಹೋವನಿಂದ ಬಂದ ಸಂದೇಶ:


ಕರುಣೆ ತೋರುವವರು ಧನ್ಯರು. ಅವರು ಕರುಣೆ ಹೊಂದುವರು.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದೆ. ನಾನು ಅವರೊಂದಿಗೆ ಮಾತನಾಡಿದೆ. ಆದರೆ ನಾನು ಅವರಿಗೆ ಸರ್ವಾಂಗಹೋಮಗಳ ಬಗ್ಗೆಯಾಗಲಿ ಯಜ್ಞಗಳ ಬಗ್ಗೆಯಾಗಲಿ ಯಾವ ಆಜ್ಞೆಯನ್ನೂ ಕೊಟ್ಟಿಲ್ಲ.


ಆದ್ದರಿಂದ ಕ್ರಿಸ್ತನಲ್ಲಿ ನೆಲಸಿರುವ ವ್ಯಕ್ತಿಯು ಪಾಪದಲ್ಲೇ ಮುಂದುವರಿಯುವುದಿಲ್ಲ. ಪಾಪವನ್ನು ಮಾಡುತ್ತಲೇ ಇರುವವನು ಆತನನ್ನು ಎಂದೂ ಅರ್ಥಮಾಡಿಕೊಂಡವನಲ್ಲ ಮತ್ತು ಎಂದೂ ತಿಳಿದವನಲ್ಲ.


ದೇವರ ಆಜ್ಞೆಗಳಿಗೆ ನಾವು ವಿಧೇಯರಾಗಿದ್ದರೆ, ದೇವರ ಬಗ್ಗೆ ನಿಜವಾಗಿಯೂ ತಿಳಿದಿದ್ದೇವೆಂಬುದು ಖಚಿತವಾಗುತ್ತದೆ.


ನಾನು ದೇವರಾದ ಯೆಹೋವನನ್ನು ಸಂಧಿಸಲು ಬರುವಾಗ ಏನನ್ನು ತೆಗೆದುಕೊಂಡು ಬರಲಿ? ಪರಲೋಕದ ದೇವರಿಗೆ ನಾನು ಅಡ್ಡಬಿದ್ದು ಆರಾಧಿಸುವಾಗ ಏನು ಮಾಡಲಿ? ನಾನು ಕರ್ತನ ಬಳಿಗೆ ಬರುವಾಗ ಸರ್ವಾಂಗಹೋಮದೊಡನೆ ಒಂದು ವರ್ಷದ ಕರುವನ್ನು ತೆಗೆದುಕೊಂಡು ಬರಲೋ?


ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.


“ನನಗೆ ಬೇಕಾಗಿರುವ ವಿಶೇಷ ದಿವಸ ಯಾವುದೆಂದು ನಾನು ಹೇಳುತ್ತೇನೆ. ಅದು ಜನರನ್ನು ಸ್ವತಂತ್ರರನ್ನಾಗಿ ಮಾಡುವ ದಿವಸ, ಜನರಿಂದ ಅವರ ಭಾರವನ್ನು ತೆಗೆದುಹಾಕುವ ದಿವಸ; ತೊಂದರೆಗೀಡಾಗಿರುವ ಜನರನ್ನು ವಿಮುಕ್ತರನ್ನಾಗಿ ಮಾಡುವ ದಿವಸ; ಅವರ ಹೆಗಲಿನಿಂದ ಭಾರದ ಹೊರೆಯನ್ನು ಇಳಿಸುವ ದಿವಸ.


ನಿನ್ನನ್ನು ನಾನು ನನ್ನ ನಂಬಿಗಸ್ತಳಾದ ವಧುವನ್ನಾಗಿ ಮಾಡುವೆನು. ಆಗ ನೀನು ನನ್ನನ್ನು ನಿಜವಾಗಿಯೂ ಅರಿತುಕೊಳ್ಳುವೆ.


ನಿಮ್ಮ ಯಜ್ಞಗಳ ಬಗ್ಗೆ ನಾನು ದೂರು ಹೇಳುತ್ತಿಲ್ಲ. ಇಸ್ರೇಲರಾದ ನೀವು ನನಗೆ ಸರ್ವಾಂಗಹೋಮಗಳನ್ನು ನಿತ್ಯವೂ ಅರ್ಪಿಸುತ್ತಲೇ ಇದ್ದೀರಿ.


ಆತನಲ್ಲದೆ ಬೇರೆ ದೇವರಿಲ್ಲ. ದೇವರನ್ನು ಪೂರ್ಣಹೃದಯದಿಂದ, ಪೂರ್ಣಬುದ್ಧಿಯಿಂದ ಹಾಗೂ ಪೂರ್ಣಶಕ್ತಿಯಿಂದ ಪ್ರೀತಿಸಬೇಕು ಮತ್ತು ಒಬ್ಬ ವ್ಯಕ್ತಿಯು ತನ್ನನ್ನು ಪ್ರೀತಿಸುವಂತೆಯೇ ಇತರರನ್ನೂ ಪ್ರೀತಿಸಬೇಕು. ನಾವು ದೇವರಿಗೆ ಅರ್ಪಿಸುವ ಪಶುಯಜ್ಞಗಳಿಗಿಂತಲೂ ಈ ಆಜ್ಞೆಗಳು ಹೆಚ್ಚು ಮುಖ್ಯವಾಗಿವೆ” ಎಂದು ಉತ್ತರಿಸಿದನು.


ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.


ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.


ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು