ಹೋಶೇಯ 8:1 - ಪರಿಶುದ್ದ ಬೈಬಲ್1 “ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬಾಯಿಗೆ ತುತೂರಿಯನ್ನು ಹಿಡಿ. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ. ಅವರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ನ್ಯಾಯ ಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಶತ್ರುಗಳು ಹದ್ದಿನ ಹಾಗೆ ಯೆಹೋವ ದೇವರ ಆಲಯದ ಮೇಲೆ ಬರುವರು. ಅಧ್ಯಾಯವನ್ನು ನೋಡಿ |
ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.
“ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ.