ಹೋಶೇಯ 8:10 - ಪರಿಶುದ್ದ ಬೈಬಲ್10 ಜನಾಂಗಗಳ ಮಧ್ಯೆ ಇರುವ ತನ್ನ ಪ್ರಿಯತಮರ ಕಡೆಗೆ ಇಸ್ರೇಲು ಹೋದನು. ಆದರೆ ನಾನು ಇಸ್ರೇಲರನ್ನು ಒಟ್ಟುಸೇರಿಸುವೆನು. ಆದರೆ ಅದರ ಮೊದಲು ಆ ಬಲಿಷ್ಠ ರಾಜನ ಕೈಯಿಂದ ಅವರ ಸಂಕಟ ಅನುಭವಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹಣ ತೆತ್ತು ಅನ್ಯರಾಷ್ಟ್ರಗಳೊಡನೆ ಮೈತ್ರಿಬೆಳೆಸಿಕೊಂಡಿದ್ದರೂ ನಾನು ಶೀಘ್ರದಲ್ಲಿ ಅದನ್ನು ಸೆರೆಗೂಡಿಸಲಿರುವೆನು. ಅಸ್ಸೀರಿಯದ ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದು ಜನಾಂಗಗಳೊಳಗೆ ವಿುಂಡರನ್ನು ಸಂಪಾದಿಸಿದರೂ ಅದನ್ನು ನಾನು ಈಗ ಸೆರೆಕೂಡುವೆನು; ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಎಫ್ರಾಯೀಮು ಜನಾಂಗಗಳಿಗೆ ತಮ್ಮನ್ನು ಮಾರಿಕೊಂಡಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿಸುವೆನು. ಅವರು ಪ್ರಬಲ ಅರಸನ ಹಿಂಸೆಯಿಂದಾಗಿ ಕಷ್ಟಪಡುವರು. ಅಧ್ಯಾಯವನ್ನು ನೋಡಿ |
ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.
ಹೋಶೇಯನು ಈಜಿಪ್ಟಿನ ರಾಜನಲ್ಲಿಗೆ ಸಂದೇಶಕರನ್ನು ಕಳುಹಿಸಿದ್ದನು. ಈಜಿಪ್ಟಿನ ರಾಜನಿಗೆ ಸೋ ಎಂಬ ಹೆಸರಿತ್ತು. ಹೋಶೇಯನು ಅಶ್ಶೂರದ ರಾಜನಿಗೆ ಪ್ರತಿವರ್ಷ ಕಪ್ಪಕಾಣಿಕಯನ್ನು ಕೊಡುತ್ತಿದ್ದನು, ಆದರೆ ಆ ವರ್ಷ ಕೊಡಲಿಲ್ಲ. ಆದರೆ ಅಶ್ಶೂರದ ರಾಜನಿಗೆ ಹೋಶೇಯನು ತನ್ನ ವಿರುದ್ಧ ಮಾಡಿರುವ ಒಳಸಂಚು ತಿಳಿದುಬಂದಿತು. ಆದ್ದರಿಂದ ಅಶ್ಶೂರದ ರಾಜನು ಹೋಶೇಯನನ್ನು ಬಂಧಿಸಿ, ಸೆರೆಯಲ್ಲಿಟ್ಟನು.