Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:12 - ಪರಿಶುದ್ದ ಬೈಬಲ್‌

12 ಎಫ್ರಾಯೀಮನಿಗೆ ನಾನು ಸಾವಿರಾರು ವಿಧಿನಿಯಮಗಳನ್ನು ಬರೆದರೂ ಅವನು ಅವುಗಳನ್ನು ಬೇರೆಯವರಿಗಾಗಿ ಬರೆದದೆ ಎಂದು ತಿಳಿದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟರೂ, ಅವುಗಳು ತನಗೆ ಸಂಬಂಧಪಟ್ಟವುಗಳಲ್ಲ ಎಂದು ಅದು ಭಾವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪದಲ್ಲಿ ಬರೆದುಕೊಟ್ಟರೂ ಅವುಗಳು ತನಗೆ ಪರಕೀಯವೆಂದು ಭಾವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟರೂ ಅವುಗಳು ತನಗೆ ಸಂಬಂಧಪಟ್ಟವುಗಳಲ್ಲವೆಂದು ಅದು ಭಾವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ನನ್ನ ನಿಯಮದ ಅನೇಕ ಸಂಗತಿಗಳನ್ನು ಅವನಿಗೆ ಬರೆದಿದ್ದೇನೆ. ಆದರೆ ಅವನು ಅವುಗಳನ್ನು ಅನ್ಯವಾದವುಗಳೆಂದು ಪರಿಗಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:12
14 ತಿಳಿವುಗಳ ಹೋಲಿಕೆ  

ಹೀಗಿರಲು ಧರ್ಮಶಾಸ್ತ್ರ ಪರಿಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಒಳ್ಳೆಯದೂ ಆಗಿದೆ.


ಹೀಗಿರಲು, ಯೆಹೂದ್ಯರ ವೈಶಿಷ್ಟವೇನು? ಸುನ್ನತಿ ಮಾಡಿಸಿಕೊಂಡಿರುವುದರಲ್ಲಿ ಏನಾದರೂ ವಿಶೇಷತೆಯಿದೆಯೇ?


“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.


ಅಲ್ಲಿ ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟೆನು. ನನ್ನ ವಿಧಿನಿಯಮಗಳನ್ನು ತಿಳಿಸಿದೆನು. ಅವುಗಳನ್ನು ಕೈಕೊಂಡು ನಡೆಯುವ ಎಲ್ಲರೂ ಜೀವಿಸುತ್ತಾರೆ.


ಈ ಜನರು ಹೆತ್ತವರಿಗೆ ವಿಧೇಯರಾಗದ ಮಕ್ಕಳಂತಿದ್ದಾರೆ. ಅವರು ಸುಳ್ಳಾಡಿಕೊಂಡು ಯೆಹೋವನ ಬೋಧನೆಯನ್ನು ನಿರಾಕರಿಸುತ್ತಾರೆ.


ನಾನು ನಿನಗೋಸ್ಕರ ಮೂವತ್ತು ನುಡಿಗಳನ್ನು ಬರೆದಿರುವೆ. ಇವು ಬುದ್ಧಿವಾದದ ಮತ್ತು ವಿವೇಕದ ನುಡಿಗಳಾಗಿವೆ.


ನನ್ನ ಕಣ್ಣುಗಳನ್ನು ತೆರೆ, ಆಗ ನಾನು ನಿನ್ನ ಉಪದೇಶಗಳನ್ನು ಕಾಣುವೆ; ನೀನು ಮಾಡಿದ ಅದ್ಭುತಕಾರ್ಯಗಳ ಕುರಿತು ಓದುವೆ.


ಹೀಗಿರಲು ನೀವು ನನ್ನ ಸುಶಿಕ್ಷಣವನ್ನು ದ್ವೇಷಿಸುವುದೇಕೆ? ನಾನು ಹೇಳುವುದನ್ನು ನೀವು ತುಚ್ಛೀಕರಿಸುವುದೇಕೆ?


ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು