Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:14 - ಪರಿಶುದ್ದ ಬೈಬಲ್‌

14 ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆಗಳನ್ನು ನಾಶಮಾಡುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಇಸ್ರಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ. ಜುದೇಯವು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ನಿರ್ಮಿಸಿಕೊಂಡಿದೆ. ಆದರೆ ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಾರುವೆನು. ಅದು ಆ ಸೌಧಗಳನ್ನು ನುಂಗಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಸ್ರಾಯೇಲು ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಆ ಸೌಧಗಳನ್ನು ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:14
31 ತಿಳಿವುಗಳ ಹೋಲಿಕೆ  

ನೀವು ನಿಮ್ಮನ್ನು ನಿರ್ಮಿಸಿದ ಬಂಡೆಯಂತಿರುವ ದೇವರನ್ನು ತೊರೆದುಬಿಟ್ಟಿರಿ; ನಿಮಗೆ ಪ್ರಾಣವನ್ನು ಕೊಟ್ಟ ದೇವರನ್ನು ನೀವು ಮರೆತುಬಿಟ್ಟಿರಿ.


“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”


ಆದ್ದರಿಂದ ನಾನು ಯೆಹೂದದಲ್ಲಿ ಬೆಂಕಿಯನ್ನು ಹಚ್ಚುವೆನು; ಆ ಬೆಂಕಿಯು ಜೆರುಸಲೇಮಿನ ಉನ್ನತ ಬುರುಜುಗಳನ್ನು ನಾಶಮಾಡುವದು.”


ನಾನು ಇಸ್ರೇಲರಿಗೆ ಆಹಾರ ಒದಗಿಸಿದೆನು. ಅವರು ಆ ಆಹಾರವನ್ನು ಉಂಡು ತಿಂದು ತೃಪ್ತರಾಗಿ ಕೊಬ್ಬೇರಿದ್ದರಿಂದ ನನ್ನನ್ನು ಮರೆತರು.


ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.


ಆದ್ದರಿಂದ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ತೂರಿನ ಎತ್ತರವಾದ ಬುರುಜುಗಳನ್ನು ನಾಶಮಾಡುವದು.”


ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.


ಆದ್ದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು.


ಆದ್ದರಿಂದ ನಾನು ತೇಮಾನಿನಲ್ಲಿ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ಬೋಚ್ರದ ಉನ್ನತ ಗೋಪುರಗಳನ್ನು ನಾಶಮಾಡುವದು.”


ಆದರೆ ನಾನು ಹಜಾಯೇಲನ ನಿವಾಸದಲ್ಲಿ ಬೆಂಕಿಯನ್ನು ಪ್ರಾರಂಭಿಸುವೆನು. ಅದು ಬೆನ್ಹದದನ ಭವ್ಯ ಅರಮನೆಗಳನ್ನೆಲ್ಲಾ ಸುಟ್ಟುಹಾಕುವದು.


“ಆಕೆಯು ಬಾಳನ ಸೇವೆಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.


ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು.


ಬೋಳುಪರ್ವತದ ಮೇಲೆ ಅಳುವ ಧ್ವನಿಯನ್ನು ನೀವು ಕೇಳಬಹುದು. ಇಸ್ರೇಲಿನ ಜನರು ಕಣ್ಣೀರು ಸುರಿಸಿ ಕರುಣೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಅವರು ತುಂಬಾ ಕೆಟ್ಟುಹೋಗಿ ತಮ್ಮ ದೇವರಾದ ಯೆಹೋವನನ್ನು ಮರೆತರು.


ಯುವತಿಯು ತನ್ನ ಆಭರಣಗಳನ್ನು ಮರೆಯುವಳೇ? ಇಲ್ಲ. ವಧುವು ಮದುವೆಯ ಉಡುಪನ್ನು ಧರಿಸಿಕೊಳ್ಳಲು ಮರೆಯುವಳೇ? ಇಲ್ಲ. ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತುಬಿಟ್ಟಿದ್ದಾರೆ.


ನಾನು ನಿರ್ಮಿಸಿದ ಈ ಜನರು ನನಗೆ ಸ್ತೋತ್ರಗಾನ ಹಾಡುವರು.


ಆದ್ದರಿಂದ ಯೆಹೋವನು ಅವರ ಮೇಲೆ ಕೋಪಗೊಂಡನು. ಅವರಿಗೆ ವಿರುದ್ಧವಾಗಿ ಬಲವಾದ ಯುದ್ಧಗಳು ನಡೆಯುವಂತೆ ಮಾಡಿದನು. ಇಸ್ರೇಲ್ ಜನರ ಸುತ್ತಲೂ ಬೆಂಕಿಯು ಆವರಿಸಿಕೊಂಡಿರುವಂತಿದ್ದರೂ ಅವರಿಗೆ ಅದರ ಪ್ರಜ್ಞೆಯಿರಲಿಲ್ಲ. ಅವರೇ ಉರಿಯುತ್ತಿರುವಂತೆ ಅದಿತ್ತು. ಆದರೆ ಅವರು ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ.


ಯೆಹೋವನು ಯುದ್ಧವೀರನಂತೆ ಹೊರಡುವನು. ಆತನು ಯುದ್ಧಮಾಡಲು ತಯಾರಾಗಿರುವ ಶೂರನಂತಿದ್ದಾನೆ. ಆತನು ಉತ್ಸಾಹದಿಂದ ಗಟ್ಟಿಯಾಗಿ ಕೂಗುತ್ತಾ ತನ್ನ ವೈರಿಗಳನ್ನು ಸೋಲಿಸುವನು.


ಅವನು ತನ್ನ ಎಲ್ಲಾ ಮಕ್ಕಳನ್ನು ನೋಡಿ ‘ಪವಿತ್ರ ಎಂಬುದೇ ನನ್ನ ಹೆಸರು’ ಎಂದು ಹೇಳುವನು. ನನ್ನ ಕೈಗಳಿಂದ ನಾನು ಆ ಮಕ್ಕಳನ್ನು ನಿರ್ಮಿಸಿದೆನು. ಆ ಮಕ್ಕಳು ಯಾಕೋಬನ ಪರಿಶುದ್ಧ ದೇವರು ವಿಶೇಷವಾದವನು ಎಂದು ಹೇಳುವರು. ಆ ಮಕ್ಕಳು ಇಸ್ರೇಲರ ದೇವರನ್ನು ಗೌರವಿಸುವರು.


ಆತನು ನಮ್ಮ ಪೂರ್ವಿಕರನ್ನು ರಕ್ಷಿಸಿದರೂ ಅವರು ಆತನನ್ನು ಮರೆತುಬಿಟ್ಟರು! ಈಜಿಪ್ಟಿನಲ್ಲಿ ಮಹತ್ಕಾರ್ಯಗಳನ್ನು ಮಾಡಿದ ದೇವರನ್ನು ಅವರು ಮರೆತುಬಿಟ್ಟರು.


ಯೋತಾಮನು ಯೆಹೂದದ ಬೆಟ್ಟಪ್ರದೇಶಗಳಲ್ಲಿ ಪಟ್ಟಣಗಳನ್ನು ಮತ್ತು ಕಾಡಿನೊಳಗೆ ಗೋಪುರಗಳನ್ನು ಕಟ್ಟಿಸಿದನು.


ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.


ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.


ಯಾರೊಬ್ಬಾಮನು ಎತ್ತರದ ಸ್ಥಳಗಳಲ್ಲಿ ಆಲಯಗಳನ್ನು ನಿರ್ಮಿಸಿದನು. ಅವನು ಇಸ್ರೇಲಿನ ಬೇರೆಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಂಡನು. (ಅವನು ಲೇವಿಯರ ಕುಲವೊಂದರಿಂದಲೇ ಯಾಜಕರನ್ನು ಆರಿಸಿಕೊಳ್ಳಲಿಲ್ಲ.)


ಹಿಜ್ಕೀಯನು ರಾಜನಾಗಿದ್ದ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ರಾಜನಾದ ಸನ್ಹೇರೀಬನು ಯೆಹೂದದ ಬಲಾಢ್ಯ ನಗರಗಳ ವಿರುದ್ಧವಾಗಿ ಹೋರಾಡಲು ಹೋದನು. ಸನ್ಹೇರೀಬನು ಆ ನಗರಗಳನ್ನೆಲ್ಲ ಸೋಲಿಸಿದನು.


ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.


ಆಗ ಎಫ್ರಾಯೀಮಿನಲ್ಲಿರುವ (ಇಸ್ರೇಲಿನಲ್ಲಿರುವ) ಪ್ರತಿಯೊಬ್ಬನೂ, ಸಮಾರ್ಯದ ನಾಯಕರೂ, ದೇವರು ತಮ್ಮನ್ನು ಶಿಕ್ಷಿಸಿದ್ದಾನೆಂದು ತಿಳಿದುಕೊಳ್ಳುವರು. ಅವರು ಬಹು ಗರ್ವಿಷ್ಠರಾಗಿ ಹೆಚ್ಚಳಪಡುತ್ತಿದ್ದಾರೆ. ಅವರು ಹೇಳುವುದೇನೆಂದರೆ,


“ಈ ಇಟ್ಟಿಗೆಗಳು ಕೆಳಗೆ ಬಿದ್ದರೂ ನಾವು ಅವುಗಳನ್ನು ಮತ್ತೆ ಕಟ್ಟುತ್ತೇವೆ. ನಾವು ಅದನ್ನು ಬಲವಾದ ಕಲ್ಲುಗಳಿಂದ ಕಟ್ಟುವೆವು. ಈ ಸಣ್ಣಸಣ್ಣ ಮರಗಳು ಕಡಿದುಹಾಕಲ್ಪಟ್ಟರೂ ಆ ಸ್ಥಳದಲ್ಲಿ ನಾವು ದೇವದಾರು ಮರಗಳನ್ನು ನೆಡುವೆವು. ಆ ದೇವದಾರು ಮರಗಳು ಎತ್ತರವಾಗಿಯೂ ಬಲವಾಗಿಯೂ ಇರುತ್ತವೆ.”


ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”


“ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: ‘ಜೆರುಸಲೇಮೇ, ನೀನು ನನ್ನನ್ನು ಮರೆತುಬಿಟ್ಟೆ. ನೀನು ನನ್ನನ್ನು ತೊರೆದುಬಿಟ್ಟೆ; ಆದ್ದರಿಂದ ನೀನು ನನ್ನನ್ನು ತೊರೆದ ಸೂಳೆಯಂತೆ ಜೀವಿಸಿದ್ದಕ್ಕೆ ಶಿಕ್ಷೆ ಅನುಭವಿಸಬೇಕು. ನಿನ್ನ ನೀಚ ನಡತೆಗಾಗಿ ನೀನು ಕಷ್ಟ ಅನುಭವಿಸಬೇಕು.’”


“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು