ಹೋಶೇಯ 8:7 - ಪರಿಶುದ್ದ ಬೈಬಲ್7 ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲಿಗಾಗಿ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟುಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಅವರು ಗಾಳಿಯನ್ನು ಬಿತ್ತಿದ್ದಾರೆ. ಬಿರುಗಾಳಿಯನ್ನು ಕೊಯ್ಯುತ್ತಾರೆ. ಇಸ್ರಾಯೇಲರ ಪೈರು ತೆನೆಗೆ ಬಾರದು. ಮೊಳಕೆಯು ಆಹಾರವನ್ನು ಕೊಡುವುದಿಲ್ಲ. ಒಂದು ವೇಳೆ ಅದು ಕೊಟ್ಟರೂ ವಿದೇಶಿಯರು ಅದನ್ನು ನುಂಗುತ್ತಾರೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಹಿಂತಿರುಗಿ ಬರುವೆನು. ನಾನು ಕೊಟ್ಟಿರುವ ಧಾನ್ಯವು ಕೊಯ್ಲಿಗೆ ತಯಾರಾದ ಅವಳಿಂದ ಅದನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ದ್ರಾಕ್ಷಿಹಣ್ಣು ಪಕ್ವವಾಗಿದ್ದಾಗ ನಾನು ಬಂದು ನನ್ನ ದ್ರಾಕ್ಷಾರಸವನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಕೊಟ್ಟಿರುವ ಉಣ್ಣೆ ಮತ್ತು ನಾರಿನ ಬಟ್ಟೆಯನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಅದನ್ನು ಅವಳಿಗೆ ತನ್ನ ಬೆತ್ತಲೆ ಶರೀರವನ್ನು ಮುಚ್ಚಿಕೊಳ್ಳುವದಕ್ಕೋಸ್ಕರ ಕೊಟ್ಟಿದ್ದೆನು.
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”