Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:8 - ಪರಿಶುದ್ದ ಬೈಬಲ್‌

8 “ಇಸ್ರೇಲ್ ನಾಶವಾಯಿತು. ಅವರು ಯಾರಿಗೂ ಬೇಡವಾದ ಪಾತ್ರೆಯನ್ನು ಬಿಸಾಡಿದಂತೆ ಜನಾಂಗಗಳ ಮಧ್ಯದಲ್ಲಿ ಚದರಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಸ್ರಯೇಲನ್ನು ಕಬಳಿಸಲಾಗಿದೆ. ಈಗದು ಅನ್ಯಜನಾಂಗಗಳ ಮಧ್ಯೆ ಯಾರಿಗೂ ಬೇಡವಾದ ಮಡಕೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡದ ಪಾತ್ರೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲನ್ನು ಕಬಳಿಸಲಾಗಿದೆ. ಅವರು ಜನಾಂಗಗಳಲ್ಲಿ ಬೇಡವಾದ ಪಾತ್ರೆಯ ಹಾಗೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:8
19 ತಿಳಿವುಗಳ ಹೋಲಿಕೆ  

ಯೆಹೋಯಾಚೀನನು ಎಸೆಯಲ್ಪಟ್ಟ ಒಡೆದ ಮಡಕೆಯಂತಿದ್ದಾನೆ. ಅವನು ಯಾರಿಗೂ ಬೇಡವಾಗದ ಮಡಕೆಯಂತಿದ್ದಾನೆ. ಯೆಹೋಯಾಚೀನನು ಮತ್ತು ಅವನ ಮಕ್ಕಳು ಏಕೆ ಹೊರಗೆ ಎಸೆಯಲ್ಪಡುವರು? ಅವರು ಪರದೇಶಕ್ಕೆ ಏಕೆ ಒಯ್ಯಲ್ಪಡುವರು?


“ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.


ದೇವರು ಮಾಡಿರುವುದು ಸಹ ಹೀಗೆಯೇ. ಆತನು ತನ್ನ ಕೋಪವನ್ನು ತೋರಿಸಿ, ತನ್ನ ಶಕ್ತಿಯನ್ನು ಜನರಿಗೆ ಪ್ರಸಿದ್ಧಿಪಡಿಸಬೇಕೆಂದಿದ್ದನು. ಆದರೂ ಆತನು ತನ್ನ ಕೋಪಕ್ಕೆ ಗುರಿಯಾಗಿ ನಾಶವಾಗಲಿದ್ದ ಜನರನ್ನು ಬಹು ಸಹನೆಯಿಂದ ಸಹಿಸಿಕೊಂಡನು.


“ಆದ್ದರಿಂದ ಹೋಗಿ ಇಸ್ರೇಲಿನ ಪರ್ವತಗಳಿಗೆ ನನ್ನ ಪರವಾಗಿ ಹೇಳು. ಇದು ಒಡೆಯನಾದ ಯೆಹೋವನ ನುಡಿ ಎಂದು ಹೇಳು. ‘ವೈರಿಗಳು ನಿನ್ನ ಪಟ್ಟಣಗಳನ್ನೆಲ್ಲಾ ನಾಶಮಾಡಿ ಎಲ್ಲಾ ದಿಕ್ಕುಗಳಿಂದ ನುಗ್ಗಿ ನಿನ್ನ ಮೇಲೆ ಧಾಳಿ ಮಾಡಿರುತ್ತಾರೆ. ನೀನು ಬೇರೆಯವರ ವಶವಾಗಬೇಕೆಂಬದಾಗಿ ಹೀಗೆ ಮಾಡಿದರು. ಜನರು ನಿನ್ನ ವಿಷಯವಾಗಿ ಗುಜುಗುಜು ಮಾತನಾಡಿದರು.’”


ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ. “ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು! ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು. ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು” ಎಂದು ಅವರು ಅನ್ನುತ್ತಾರೆ.


ಆತನು ಒಬ್ಬ ಶತ್ರುವಿನಂತಾಗಿದ್ದಾನೆ. ಆತನು ಇಸ್ರೇಲನ್ನು ನಾಶಮಾಡಿದನು. ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು. ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿಬಿಟ್ಟನು. ಯೆಹೂದ ಜನಾಂಗದಲ್ಲಿ ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ.


ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು. ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.


“ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು.


ಮೋವಾಬಿನ ಪ್ರತಿಯೊಂದು ಮಾಳಿಗೆಯ ಮೇಲೂ ಸಾರ್ವಜನಿಕ ಚೌಕಗಳಲ್ಲಿಯೂ ಜನ ಸತ್ತವರಿಗಾಗಿ ಶೋಕಿಸುತ್ತಿದ್ದಾರೆ. ಮೋವಾಬನ್ನು ನಾನು ಬರಿದಾದ ಪಾತ್ರೆಯಂತೆ ಮಾಡಿರುವುದರಿಂದ ದುಃಖ ವ್ಯಾಪಿಸಿದೆ.” ಇದು ಯೆಹೋವನ ನುಡಿ.


ಒಂದು ದೊಡ್ಡ ಆವೆಮಣ್ಣಿನ ಭರಣಿ ನಚ್ಚುನೂರಾಗಿ ಹೋಗುವಂತೆ ನೀವಿದ್ದೀರಿ. ಅದರ ತುಂಡುಗಳಿಂದ ಏನೂ ಪ್ರಯೋಜನವಿಲ್ಲ. ಆ ಭರಣಿಯ ಚೂರಿನಿಂದ ಸುಡುವ ಕಲ್ಲಿದ್ದಲನ್ನು ಹೊರತೆಗೆಯಲು ಅಥವಾ ಅದರಿಂದ ನೀರು ಸೇದಲು ಆಗುವದಿಲ್ಲ.”


ಅಶ್ಶೂರದ ರಾಜನು ಇಸ್ರೇಲರನ್ನು, ಸೆರೆಯಾಳುಗಳನ್ನಾಗಿ ಅಶ್ಶೂರಿಗೆ ಒಯ್ದನು. ಅವನು ಅವರನ್ನು ಹಲಹು ಎಂಬ ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ವಾಸಿಸುವಂತೆ ಮಾಡಿದನು.


ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.


“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


ಕುರುಬರೇ, ನೀವು ಕುರಿಗಳಿಗೆ (ಜನಗಳಿಗೆ) ಮುಂದಾಳಾಗಿ ನಡೆಯಬೇಕು. ಮಹಾನಾಯಕರೇ, ನೀವು ಗೋಳಾಡಲು ಪ್ರಾರಂಭಿಸಿರಿ. ಕುರಿಗಳ ಮುಂದಾಳುಗಳಾದ ನೀವು ನೋವಿನಿಂದ ನೆಲದ ಮೇಲೆ ಹೊರಳಾಡಿರಿ. ಏಕೆಂದರೆ ಈಗ ನಿಮ್ಮನ್ನು ವಧಿಸುವ ಕಾಲ ಬಂದಿದೆ. ನಾನು ನಿಮ್ಮ ಕುರಿಗಳನ್ನು ದಿಕ್ಕಾಪಾಲು ಮಾಡಿಬಿಡುತ್ತೇನೆ. ಅವುಗಳು ಒಡೆದ ಪಾತ್ರೆಯ ಚೂರುಗಳಂತೆ ಚೆಲ್ಲಾಪಿಲ್ಲಿಯಾಗುತ್ತವೆ.


ನಮ್ಮ ದೇಶವು ಬೇರೆ ಜನಾಂಗಗಳವರ ಪಾಲಾಗಿದೆ. ನಮ್ಮ ಮನೆಗಳು ಪರದೇಶಿಗಳಿಗೆ ಕೊಡಲ್ಪಟ್ಟಿವೆ.


ಚೀಯೋನಿನ ಜನರು ಬಂಗಾರದಂತೆ ಅಮೂಲ್ಯವಾಗಿದ್ದರು. ಆದರೆ ಈಗ ವೈರಿಗಳು ಅವರನ್ನು ಕುಂಬಾರನಿಂದ ಮಾಡಲ್ಪಟ್ಟಿರುವ ಜೇಡಿಮಣ್ಣಿನ ಹಳೆಯ ಮಡಕೆಗಳೋ ಎಂಬಂತೆ ಪರಿಗಣಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು