ಹೋಶೇಯ 8:9 - ಪರಿಶುದ್ದ ಬೈಬಲ್9 ಎಫ್ರಾಯೀಮನು ತನ್ನ ಪ್ರೇಮಿಗಳ ಬಳಿಗೆ ಹೋದನು. ಕಾಡುಕತ್ತೆಯಂತೆ ಅಶ್ಶೂರ್ಯದ ಕಡೆಗೆ ಅಡ್ಡಾಡುತ್ತಾ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದು ಒಂಟಿಯಾಗಿ ಅಲೆಯುವ ಕಾಡುಕತ್ತೆಯಂತೆ ಅಸ್ಸೀರಿಯಕ್ಕೆ ಹೋಗಿದೆ; ಎಫ್ರಯಿಮ್ ಕಾಮುಕರಿಗೆ ತನ್ನನ್ನೇ ಮಾರಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ; ಎಫ್ರಾಯೀಮು ಹಣತೆತ್ತು ವಿುಂಡರನ್ನು ಸಂಪಾದಿಸಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಸ್ಸೀರಿಯಗೆ ಹೋಗಿದ್ದಾರೆ. ಎಫ್ರಾಯೀಮು ಪ್ರೇಮಿಗಳಿಗೆ ತನ್ನನ್ನು ಮಾರಿಕೊಂಡಿದೆ. ಅಧ್ಯಾಯವನ್ನು ನೋಡಿ |
ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.