Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:12 - ಪರಿಶುದ್ದ ಬೈಬಲ್‌

12 ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಯಾವನೂ ಉಳಿಯದೆ ಇರುವ ತನಕ ಅವರಿಗೆ ಪುತ್ರಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ತಮ್ಮ ಮಕ್ಕಳನ್ನು ಬೆಳೆಸಿದ್ದರೂ, ಅವರ ಮಕ್ಕಳಲ್ಲಿ ಯಾರೂ ಉಳಿಯದ ಹಾಗೆ ನಾನು ಅವರನ್ನು ಮಕ್ಕಳಿಲ್ಲದವರನ್ನಾಗಿ ಮಾಡುವೆನು. ನಾನು ಅವರನ್ನು ಬಿಟ್ಟು ಹೋಗುವಾಗ ಅವರಿಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:12
23 ತಿಳಿವುಗಳ ಹೋಲಿಕೆ  

ಅವರು ನನ್ನನ್ನು ಬಿಟ್ಟು ತೊಲಗಿದರು. ಇದು ಅವರಿಗೆ ಕೆಡುಕು ಉಂಟುಮಾಡುವದು. ಅವರು ನನಗೆ ವಿಧೇಯರಾಗಲು ಇಷ್ಟಪಡಲಿಲ್ಲ. ಆದ್ದರಿಂದ ಅವರು ನಾಶವಾಗುವರು. ನಾನು ಅವರನ್ನು ರಕ್ಷಿಸಿ ಕಾಪಾಡಿದ್ದಾಗ್ಯೂ ಅವರು ನನಗೆ ವಿರುದ್ಧವಾಗಿ ಸುಳ್ಳಾಡಿದರು.


ಎಫ್ರಾಯೀಮ್ ಶಿಕ್ಷಿಸಲ್ಪಡುವುದು. ಅದರ ಬೇರು ಒಣಗುತ್ತಲಿದೆ. ಇನ್ನು ಅವರಿಗೆ ಮಕ್ಕಳಾಗದು. ಒಂದುವೇಳೆ ಮಕ್ಕಳಾದಲ್ಲಿ ಅವರ ದೇಹದಿಂದ ಬರುವ ಆ ಅಮೂಲ್ಯ ಶಿಶುವನ್ನು ನಾನು ಸಾಯಿಸುವೆನು.


ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು.


ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.


ಎಫ್ರಾಯೀಮನು ತನ್ನ ಮಕ್ಕಳನ್ನು ಉರುಲಿನ ಕಡೆಗೆ ನಡೆಸುತ್ತಿರುವದನ್ನು ನಾನು ನೋಡುತ್ತಿದ್ದೇನೆ. ಕೊಲೆಗಡುಕನೆದುರು ಎಫ್ರಾಯೀಮನು ತನ್ನ ಮಕ್ಕಳನ್ನು ತರುತ್ತಿದ್ದಾನೆ.


ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?


ಯೆಹೂದದ ಜನರನ್ನು ನಾನು ಕವೆಗೋಲಿನಿಂದ ವಿಂಗಡಿಸಿದ ದೇಶದ ಎಲ್ಲಾ ನಗರಗಳ ದ್ವಾರದಲ್ಲಿ ಚದರಿಸುತ್ತೇನೆ. ನನ್ನ ಜನರು ಬದಲಾಗಲಿಲ್ಲ. ನಾನು ಅವರನ್ನು ನಾಶಮಾಡುತ್ತೇನೆ. ನಾನು ಅವರ ಮಕ್ಕಳನ್ನು ಕಸಿದುಕೊಳ್ಳುತ್ತೇನೆ.


ದುಷ್ಟನು ಅನೇಕ ಮಕ್ಕಳನ್ನು ಪಡೆದುಕೊಂಡರೂ ಅವರು ಯುದ್ಧದಲ್ಲಿ ಕೊಲ್ಲಲ್ಪಡುವರು; ಅವರಿಗೆ ಊಟಕ್ಕೂ ಇರುವುದಿಲ್ಲ.


ಯೆಹೋವನು ಇಸ್ರೇಲನ್ನು ತನ್ನ ದೃಷ್ಟಿಯಿಂದ ದೂರ ತಳ್ಳುವವರೆಗೆ, ಅವರು ಈ ಪಾಪಗಳನ್ನು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಇದು ಸಂಭವಿಸುತ್ತದೆಂದು ಯೆಹೋವನು ಹೇಳಿದ್ದನು! ಆತನು ಜನರಿಗೆ ಇದನ್ನು ಮುಂಚೆಯೇ ತಿಳಿಸಲು ತನ್ನ ಪ್ರವಾದಿಗಳನ್ನು ಕಳುಹಿಸಿದ್ದನು. ಆದ್ದರಿಂದಲೇ ಇಸ್ರೇಲರನ್ನು ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಹಿಡಿದು ಒಯ್ದರು. ಅವರು ಇಂದಿಗೂ ಅಲ್ಲಿಯೇ ಇದ್ದಾರೆ.


ಆದ್ದರಿಂದ ಯೆಹೋವನು ಇಸ್ರೇಲಿನ ಬಗ್ಗೆ ಉಗ್ರಕೋಪಿಯಾಗಿ, ಅವರನ್ನು ತನ್ನ ದೃಷ್ಟಿಯಿಂದ ದೂರಮಾಡಿದನು. ಯೆಹೂದಕುಲದವರ ಹೊರತಾಗಿ ಇಸ್ರೇಲರಲ್ಲಿ ಯಾರೂ ಉಳಿಯಲಿಲ್ಲ!


ಯೆಹೋವನ ಆತ್ಮವು ಸೌಲನನ್ನು ಬಿಟ್ಟುಹೋಯಿತು. ನಂತರ ಯೆಹೋವನು ದುರಾತ್ಮವೊಂದನ್ನು ಸೌಲನ ಬಳಿಗೆ ಕಳುಹಿಸಿದನು. ಅದು ಅವನಿಗೆ ಬಹಳ ತೊಂದರೆ ಮಾಡಿತು.


ಬಾರಾಕ ಮತ್ತು ಅವನ ಜನರು ಸೀಸೆರನ ಸೈನ್ಯವನ್ನು ಮತ್ತು ರಥಗಳನ್ನು ಹರೋಷೆತ್ ಹಗ್ಗೋಯಿಮ್‌ನವರೆಗೆ ಬೆನ್ನಟ್ಟಿದರು. ಬಾರಾಕ ಮತ್ತು ಅವನ ಜನರು ಖಡ್ಗದಿಂದ ಸೀಸೆರನ ಜನರನ್ನು ಕೊಂದುಹಾಕಿದರು. ಸೀಸೆರನ ಜನರಲ್ಲಿ ಒಬ್ಬನನ್ನೂ ಜೀವಂತವಾಗಿ ಬಿಡಲಿಲ್ಲ.


“ನಿಮ್ಮ ಗಂಡುಹೆಣ್ಣು ಮಕ್ಕಳನ್ನು ಬೇರೆಯವರು ಎತ್ತಿಕೊಂಡು ಹೋಗುವರು. ನೀವು ಹಗಲುರಾತ್ರಿ ನಿಮ್ಮ ಮಕ್ಕಳಿಗಾಗಿ ಹುಡುಕಾಡುವಿರಿ. ಹುಡುಕಾಡುತ್ತಾ ನಿಮ್ಮ ಕಣ್ಣುಗಳು ಕಂಗೆಡುವವು; ಆದರೆ ಅವರು ನಿಮಗೆ ದೊರಕುವುದಿಲ್ಲ. ಯೆಹೋವನು ನಿಮಗೆ ಸಹಾಯ ಮಾಡುವುದಿಲ್ಲ.


ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದ್ದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನ್ನು ಕೇಳು. ನೀನು ಕೇಳದಿದ್ದರೆ ನಾನು ನಿನಗೆ ವಿಮುಖನಾಗುವೆ. ನಾನು ನಿನ್ನ ಪ್ರದೇಶವನ್ನು ಒಂದು ಮರಳುಗಾಡಾಗಿ ಮಾಡುತ್ತೇನೆ. ಅಲ್ಲಿ ಯಾರೂ ವಾಸಮಾಡಲು ಸಾಧ್ಯವಾಗದು.”


ಅಂಥಾ ಜನರನ್ನು ಯೆಹೋವನು ಯೆಹೂದ ವಂಶದಿಂದಲೇ ತೆಗೆದುಹಾಕುವನು. ಅವರು ಯೆಹೋವನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬರಬಹುದು. ಆದರೆ ಅದು ಏನೂ ಪ್ರಯೋಜನವಿಲ್ಲ.


ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ ನಲವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸುವಿರಿ. ನನ್ನನ್ನು ತಿರಸ್ಕರಿಸುವುದೆಂದರೆ ಏನೆಂಬುದು ನಿಮಗೆ ಗೊತ್ತಾಗುತ್ತದೆ.’


ನಿಮಗೆ ಹೆಚ್ಚು ಮಕ್ಕಳಿಲ್ಲದಂತೆ ಮಾಡುವನು. ನಿಮ್ಮ ಹೊಲಗಳನ್ನು ಶಪಿಸಿ ನಿಮಗೆ ಹೆಚ್ಚು ಬೆಳೆಯಾಗದಂತೆ ಮಾಡುವನು. ನಿಮ್ಮ ಪಶುಪ್ರಾಣಿಗಳನ್ನು ಶಪಿಸಿ ಅವುಗಳು ಮರಿಗಳನ್ನು ಈಯದಂತೆ ಮಾಡುವನು. ಆತನು ನಿಮ್ಮ ಎಲ್ಲಾ ಮರಿಗಳನ್ನೂ ಕರುಗಳನ್ನೂ ಶಪಿಸುವನು.


ಭೀತಿಯು ಸುತ್ತಮುತ್ತಲಿಂದ ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ. ಯೆಹೋವನ ಕೋಪದ ದಿನದಂದು ಯಾರೂ ತಪ್ಪಿಸಿಕೊಳ್ಳಲಿಲ್ಲ. ಯಾರೂ ಉಳಿಯಲಿಲ್ಲ. ನಾನು ಸಾಕಿಸಲಹಿದವರನ್ನು ನನ್ನ ವೈರಿಯು ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು