ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.
ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.
“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.
ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ ದೇವರ ಉಸಿರಿಗೆ ಅವು ಬಾಡಿ ಸಾಯುವವು; ಗಾಳಿಯು ಒಣಹುಲ್ಲಿನಂತೆ ಅವುಗಳನ್ನು ಬಡಿದುಕೊಂಡು ಹೋಗುವದು.
ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು.