ಆದ್ದರಿಂದ ನಾನು ಹಿಂತಿರುಗಿ ಬರುವೆನು. ನಾನು ಕೊಟ್ಟಿರುವ ಧಾನ್ಯವು ಕೊಯ್ಲಿಗೆ ತಯಾರಾದ ಅವಳಿಂದ ಅದನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ದ್ರಾಕ್ಷಿಹಣ್ಣು ಪಕ್ವವಾಗಿದ್ದಾಗ ನಾನು ಬಂದು ನನ್ನ ದ್ರಾಕ್ಷಾರಸವನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಕೊಟ್ಟಿರುವ ಉಣ್ಣೆ ಮತ್ತು ನಾರಿನ ಬಟ್ಟೆಯನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಅದನ್ನು ಅವಳಿಗೆ ತನ್ನ ಬೆತ್ತಲೆ ಶರೀರವನ್ನು ಮುಚ್ಚಿಕೊಳ್ಳುವದಕ್ಕೋಸ್ಕರ ಕೊಟ್ಟಿದ್ದೆನು.
ಜನರಿಗೆ ಇಪ್ಪತ್ತು ಕಿಲೋ ಧಾನ್ಯ ಬೇಕಿದ್ದರೆ ರಾಶಿಯಲ್ಲಿ ಹತ್ತು ಕಿಲೋ ಮಾತ್ರ ಇರುತ್ತಿತ್ತು. ಜನರು ದ್ರಾಕ್ಷಾರಸದ ಪೀಪಾಯಿಯಿಂದ ಐವತ್ತು ಲೀಟರ್ ದ್ರಾಕ್ಷಾರಸ ತೆಗೆಯಲು ಹೋದರೆ ಅಲ್ಲಿ ಇಪ್ಪತ್ತು ಲೀಟರ್ ಮಾತ್ರ ಇರುತ್ತಿತ್ತು.
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.
ಆಕೆಯ ದ್ರಾಕ್ಷಾಲತೆಗಳನ್ನೂ ಅಂಜೂರದ ಮರಗಳನ್ನೂ ನಾಶಮಾಡುವೆನು. ‘ಇವುಗಳನ್ನು ನನ್ನ ಪ್ರಿಯತಮರು ನನಗೆ ಕೊಟ್ಟರು’ ಎಂದು ಆಕೆ ಹೇಳುತ್ತಾಳೆ. ಆದರೆ ನಾನು ಆಕೆಯ ತೋಟವನ್ನೇ ಬದಲಾಯಿಸುವೆನು. ಅದು ದಟ್ಟ ಅಡವಿಯಂತೆ ಆಗುವದು. ಅದರಲ್ಲಿದ್ದ ಮರಗಳ ಹಣ್ಣನ್ನು ಕಾಡುಪ್ರಾಣಿಗಳು ಬಂದು ತಿನ್ನುವವು.
ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.