Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:3 - ಪರಿಶುದ್ದ ಬೈಬಲ್‌

3 ಯೆಹೋವನ ದೇಶದಲ್ಲಿ ಇಸ್ರೇಲು ವಾಸಿಸದು. ಎಫ್ರಾಯೀಮ್ ಈಜಿಪ್ಟಿಗೆ ಹಿಂದಿರುಗುವದು. ಅಶ್ಶೂರ್ಯದಲ್ಲಿ ಅವರು ತಮಗೆ ನಿಷೇಧಿಸಲ್ಪಟ್ಟ ಆಹಾರವನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ಸರ್ವೇಶ್ವರಸ್ವಾಮಿಯ ನಾಡಿನಲ್ಲಿ ವಾಸಮಾಡುವುದಿಲ್ಲ. ಎಫ್ರಯಿಮರು ಈಜಿಪ್ಟಿಗೆ ಹಿಂದಿರುಗುವರು. ಅಸ್ಸೀರಿಯದಲ್ಲಿ ಅವರು ತಿನ್ನುವ ಆಹಾರ ಹೊಲಸಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ತಿನ್ನುವ ಆಹಾರವು ಹೊಲಸಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಯೆಹೋವ ದೇವರ ದೇಶದಲ್ಲಿ ನೆಲೆಸುವುದಿಲ್ಲ. ಆದರೆ ಎಫ್ರಾಯೀಮು ಈಜಿಪ್ಟಿಗೆ ಹಿಂದಿರುಗುವುದು. ಅವರು ಅಸ್ಸೀರಿಯದಲ್ಲಿ ಅಶುದ್ಧವಾದವುಗಳನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:3
24 ತಿಳಿವುಗಳ ಹೋಲಿಕೆ  

ಬಳಿಕ ಯೆಹೋವನು, “ನಾನು ಇಸ್ರೇಲ್ ಜನರನ್ನು ಬಲವಂತವಾಗಿ ಕಳುಹಿಸುವ ಪರದೇಶಗಳಲ್ಲಿ ಅವರು ಅಶುದ್ಧವಾದ ರೊಟ್ಟಿಗಳನ್ನು ತಿನ್ನುತ್ತಾರೆಂದು ಇದು ಸೂಚಿಸುತ್ತದೆ” ಎಂದು ಹೇಳಿದನು.


ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.


“ಭೂಮಿಯು ನನಗೆ ಸೇರಿದ್ದು. ಆದ್ದರಿಂದ ನೀವು ನಿಜವಾಗಿಯೂ ಅದನ್ನು ಶಾಶ್ವತವಾಗಿ ಮಾರುವುದಕ್ಕಾಗುವುದಿಲ್ಲ. ನೀವು ಕೇವಲ ನನ್ನ ಆಶ್ರಯದಲ್ಲಿ ವಾಸಿಸುತ್ತಿರುವ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೀರಿ.


“ನಾನು ನಿಮ್ಮನ್ನು ಅನೇಕ ಅಮೂಲ್ಯವಸ್ತುಗಳಿಂದ ಕೂಡಿದ ಫಲವತ್ತಾದ ಭೂಮಿಗೆ ಕರೆದುತಂದೆ. ಅಲ್ಲಿ ಬೆಳೆಯುವ ಫಲಗಳನ್ನು ತಿನ್ನಲಿ ಎಂಬ ಉದ್ದೇಶದಿಂದ ನಾನು ಕರೆದುತಂದೆ. ಆದರೆ ನೀವು ಬಂದು ನನ್ನ ಭೂಮಿಯನ್ನು ಹೊಲಸು ಮಾಡಿದಿರಿ. ನಾನು ಆ ಭೂಮಿಯನ್ನು ನಿಮಗೆ ಕೊಟ್ಟೆ, ಆದರೆ ನೀವು ಅದನ್ನು ಕೆಟ್ಟ ಸ್ಥಳವನ್ನಾಗಿ ಮಾಡಿದಿರಿ.


ಹೀಗೆ ಎಫ್ರಾಯೀಮ್ ತಿಳಿವಳಿಕೆ ಇಲ್ಲದ ಮೂರ್ಖ ಪಾರಿವಾಳದಂತಾಗಿದೆ. ಜನರು ಸಹಾಯಕ್ಕಾಗಿ ಈಜಿಪ್ಟನ್ನು ಕರೆದರು, ಅಶ್ಶೂರ್ಯದ ಕಡೆಗೆ ಓಡಿದರು.


ದಾನಿಯೇಲನು ಅರಸನ ಪುಷ್ಟಿದಾಯಕ ಆಹಾರವನ್ನು ಮತ್ತು ಪಾನೀಯವನ್ನು ಇಷ್ಟಪಡಲಿಲ್ಲ. ಆ ಆಹಾರ ಮತ್ತು ಪಾನೀಯಗಳಿಂದ ತನ್ನನ್ನು ಅಶುದ್ಧಗೊಳಿಸಿಕೊಳ್ಳಲು ದಾನಿಯೇಲನಿಗೆ ಇಷ್ಟವಿರಲಿಲ್ಲ. ಆದ್ದರಿಂದ ಈ ರೀತಿ ತನ್ನನ್ನು ಅಶುದ್ಧಗೊಳಿಸಿಕೊಳ್ಳದೆ ಇರುವದಕ್ಕಾಗಿ ಅಶ್ಪೆನಜನ ಅಪ್ಪಣೆಯನ್ನು ಕೇಳಿದನು.


ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”


ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.


“ಯೆಹೋವನು ನಿಮ್ಮ ಅಭಿವೃದ್ದಿಯಲ್ಲಿ ಸಂತೋಷಪಡುವಂತೆ ನಿಮ್ಮ ಅವನತಿಯಲ್ಲಿಯೂ ನಿಮ್ಮ ನಾಶನದಲ್ಲಿಯೂ ಸಂತೋಷಪಡುವನು. ನೀವು ಆ ದೇಶವನ್ನು ನಿಮ್ಮದನ್ನಾಗಿಸಿಕೊಳ್ಳಲು ಹೋಗುವಿರಿ. ಆದರೆ ಜನರು ನಿಮ್ಮನ್ನು ದೇಶದಿಂದ ಹೊರಡಿಸಿ ಅಟ್ಟಿಬಿಡುವರು.


ಆದ್ದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.


ಆದರೆ ಪೇತ್ರನು, “ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದದ್ದನ್ನು ಮತ್ತು ಅಶುದ್ಧವಾದದ್ದನ್ನು ನಾನೆಂದೂ ತಿಂದವನಲ್ಲ” ಎಂದು ಹೇಳಿದನು.


ಎದ್ದು ಈ ಸ್ಥಳವನ್ನು ಬಿಟ್ಟುಹೋಗು. ಇದು ನಿನ್ನ ವಿಶ್ರಾಂತಿಯ ಸ್ಥಳವಲ್ಲ, ಯಾಕೆಂದರೆ ನೀನು ಇದನ್ನು ಹಾಳು ಮಾಡಿರುವೆ. ನೀನು ಇದನ್ನು ಹೊಲಸು ಮಾಡಿರುವೆ, ಆದ್ದರಿಂದ ಇದು ನಾಶವಾಗುವದು; ಭಯಂಕರ ರೀತಿಯಲ್ಲಿ ಕೆಡವಲ್ಪಡುವದು.


ಈಜಿಪ್ಟಿನಿಂದ ಅವರು ಪಕ್ಷಿಗಳಂತೆ ನಡುಗುತ್ತಾ ಬರುವರು. ಅಶ್ಶೂರದಿಂದ ನಡುಗುವ ಪಾರಿವಾಳಗಳ ರೀತಿಯಲ್ಲಿ ಬರುವರು. ಆಗ ನಾನು ಅವರನ್ನು ಮನೆಗೆ ಕರೆದುಕೊಂಡು ಹೋಗುವೆನು. ಇದು ಯೆಹೋವನ ನುಡಿ.


“ದೇವರ ಕಡೆಗೆ ಹಿಂದಿರುಗಲು ಇಸ್ರೇಲರಿಗೆ ಮನಸ್ಸಿಲ್ಲ. ಆದ್ದರಿಂದ ಅವರು ಈಜಿಪ್ಟಿಗೆ ಹೋಗುವರು. ಅಶ್ಶೂರದ ಅರಸನು ಅವರಿಗೆ ಅರಸನಾಗುವನು.


ಶತ್ರುಗಳು ಇಸ್ರೇಲರಿಂದ ಎಲ್ಲವನ್ನು ದೋಚಿಕೊಂಡು ಹೋದುದರಿಂದ ಇಸ್ರೇಲರು ಬಿಟ್ಟು ಹೊರಟರು. ಈಜಿಪ್ಟ್ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳುವುದು. ಮೆಂಫಿಸ್ ಪಟ್ಟಣವು ಅವರನ್ನು ಹೂಳಿಡುವದು. ಅವರ ಬೆಳ್ಳಿಯ ನಿಕ್ಷೇಪದ ಮೇಲೆ ಕಳೆ ಬೆಳೆಯುವದು. ಇಸ್ರೇಲರು ವಾಸಿಸಿದ್ದಲ್ಲಿ ಮುಳ್ಳಿನ ಗಿಡಗಳು ಬೆಳೆಯುವವು.


ನಿಮ್ಮ ದೇವರಾದ ಯೆಹೋವನು ಮಾಡಿದ ಪ್ರತಿಯೊಂದು ಒಳ್ಳೆಯ ವಾಗ್ದಾನವು ನೆರವೇರಿದೆ. ಅದೇ ರೀತಿಯಲ್ಲಿ ಯೆಹೋವನು ತನ್ನ ಉಳಿದ ವಾಗ್ದಾನವನ್ನು ನೆರವೇರಿಸುವನು. ನೀವು ತಪ್ಪುಗಳನ್ನು ಮಾಡಿದರೆ ನಿಮಗೆ ಕೆಟ್ಟದ್ದಾಗುವುದೆಂದೂ ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಗಟ್ಟುವದಾಗಿಯೂ ಆತನು ಹೇಳಿದ್ದಾನೆ.


ಯೆಹೋವನು ನಿಮ್ಮನ್ನು ಹಡಗುಗಳ ಮುಖಾಂತರ ಈಜಿಪ್ಟಿಗೆ ಕೊಂಡೊಯ್ಯುವನು. ನೀವು ಅಲ್ಲಿಗೆ ಹೋಗುವುದೇ ಇಲ್ಲವೆಂದು ನಾನು ಹೇಳಿದ್ದೆನು. ಆದರೆ ದೇವರು ನಿಮ್ಮನ್ನು ಅಲ್ಲಿಗೆ ಕಳುಹಿಸುವನು. ಈಜಿಪ್ಟಿನಲ್ಲಿ ನಿಮ್ಮನ್ನು ನೀವೇ ಗುಲಾಮರನ್ನಾಗಿ ನಿಮ್ಮ ವೈರಿಗಳಿಗೆ ಮಾರಿಕೊಳ್ಳುವಿರಿ; ಆದರೆ ಯಾರೂ ನಿಮ್ಮನ್ನು ಕೊಂಡುಕೊಳ್ಳುವವರಿರುವುದಿಲ್ಲ.”


“ನೀವು ನನ್ನ ಕಟ್ಟಳೆ ಮತ್ತು ನಿಯಮಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು. ನೀವು ಅವುಗಳಿಗೆ ವಿಧೇಯರಾಗಬೇಕು. ನಾನು ನಿಮ್ಮನ್ನು ನಿಮ್ಮ ದೇಶಕ್ಕೆ ನಡಿಸುತ್ತಿದ್ದೇನೆ. ನೀವು ಆ ದೇಶದಲ್ಲಿ ವಾಸಿಸುವಿರಿ. ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾದರೆ, ಆಗ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.


ನೀವು ಈ ಕಾರ್ಯಗಳನ್ನು ಮಾಡಿದರೆ, ನೀವು ಆ ದೇಶವನ್ನು ಹೊಲೆಮಾಡುವಿರಿ. ಅದು ಮೊದಲು ವಾಸಿಸಿದ ಜನಾಂಗಗಳನ್ನು ಕಾರಿಬಿಟ್ಟಂತೆ ನಿಮ್ಮನ್ನೂ ಕಾರಿಬಿಡುವುದು.


ನಾವು ಈಜಿಪ್ಟಿನೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡೆವು. ಸಾಕಷ್ಟು ಆಹಾರಕ್ಕಾಗಿ ನಾವು ಅಸ್ಸೀರಿಯಾದೊಡನೆ ಒಪ್ಪಂದ ಮಾಡಿಕೊಂಡೆವು.


ಅವರು ದೇವರಲ್ಲದ್ದಕ್ಕೆ ತಿರುಗಿಕೊಂಡರು. ಮೋಸದ ಬಿಲ್ಲಿನಂತೆ ಅವರಾದರು. ಅವರ ನಾಯಕರು ತಮ್ಮ ಶಕ್ತಿಯ ಬಗ್ಗೆ ಹೆಚ್ಚಳಪಟ್ಟರು. ಆದರೆ ಅವರು ಕತ್ತಿಯಲ್ಲಿ ಸಾಯುವರು. ಆಗ ಈಜಿಪ್ಟಿನ ಜನರು ಅವರನ್ನು ನೋಡಿ ನಗಾಡುವರು.


ಆದರೆ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಹೆಂಡತಿಯು ಪಟ್ಟಣದೊಳಗೆ ವೇಶ್ಯೆಯಾಗುವಳು. ನಿನ್ನ ಗಂಡು, ಹೆಣ್ಣುಮಕ್ಕಳು ಕತ್ತಿಯಿಂದ ಸಾಯುವರು. ಅನ್ಯರು ನಿನ್ನ ದೇಶವನ್ನು ಕಿತ್ತುಕೊಂಡು ತಮ್ಮೊಳಗೆ ಹಂಚಿಕೊಳ್ಳುವರು. ಮತ್ತು ನೀನು ಪರದೇಶದಲ್ಲಿ ಸಾಯುವೆ. ಇಸ್ರೇಲಿನ ಜನರು ಖಂಡಿತವಾಗಿಯೂ ಸೆರೆಹಿಡಿಯಲ್ಪಟ್ಟು ತಮ್ಮ ದೇಶದಿಂದ ಒಯ್ಯಲ್ಪಡುವರು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು