ಹೋಶೇಯ 9:9 - ಪರಿಶುದ್ದ ಬೈಬಲ್9 ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ; ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಗಿಬೆಯದ ದಿವಸಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ. ಆದ್ದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕ ಮಾಡಿಕೊಳ್ಳುವನು. ಅವರ ಪಾಪಕ್ಕೆ ತನ್ನ ದಂಡನೆಯನ್ನು ವಿಧಿಸುವನು. ಅಧ್ಯಾಯವನ್ನು ನೋಡಿ |
ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.
ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.